ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆಯೇ ಇಲ್ಲವಾಗಿದೆ ! ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ. ಭದ್ರಾವತಿಯಲ್ಲಿ ಒಂದು ಪೈಸೆ ಅಭಿವೃದ್ಧಿ ಕೆಲಸ ಮಾಡದ ನಾಲಾಯಕ್ಕಾಂಗ್ರೆಸ್ಶಾಸಕ ಸಂಗಮೇಶ್ಹಾಗೂ ಅವರ ಮಗ ಬಿ.ಎಸ್.ಬಸವೇಶ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ, ಗೂಂಡಾಗಿರಿ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.
ಅಕ್ರಮ ಮರಳುಗಾರಿಕೆಯನ್ನು ತಡೆಯಲು ಬಂದ ಕರ್ತವ್ಯನಿರತ ಮಹಿಳಾ ಅಧಿಕಾರಿಗೆ ಶಾಸಕ ಸಂಗಮೇಶ್ಅವರ ಪುತ್ರ ಫೋನಿನಲ್ಲಿ ಬೆದರಿಕೆ, ಧಮ್ಕಿ ಹಾಕಿ, ಅಶ್ಲೀಲ ಶಬ್ಧಗಳಿಂದ ನಿಂದಿಸಿರುವುದು ಅಕ್ಷಮ್ಯ ಅಪರಾಧ.
ರಾಜ್ಯದಲ್ಲಿರುವ ಮಹಿಳಾ ಆಯೋಗ ಏನು ಮಾಡುತ್ತಿದೆ ? ಮಹಿಳೆಯ ಗೌರವಕ್ಕೆ ಧಕ್ಕೆ ತಂದಿರುವ ಹೆಣ್ಣುನಿಂದಕ ಶಾಸಕರ ಪುತ್ರನ ವಿರುದ್ಧ ಸರ್ಕಾರ ತಕ್ಷಣವೇ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಜೆಡಿಎಸ್ ಪಕ್ಷವು ಆಗ್ರಹಿಸಿದೆ.
ಸಿಎಂ ಸಿದ್ದರಾಮಯ್ಯ ಅವರೇ, ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರೇ, ಲಕ್ಷ್ಮೀಹೆಬ್ಬಾಳ್ಕರ್ ಮೇಡಂ ತಾವು ಈಗ ಮಹಿಳಾ ಅಧಿಕಾರಿಯ ರಕ್ಷಣೆಗೆ ನಿಂತು ನ್ಯಾಯ ಒದಗಿಸಬೇಕಿದೆ ಎಂದು ಜೆಡಿಎಸ್ ಆಗ್ರಹ ಮಾಡಿದೆ.

