ಐಮಂಗಲ ಪೊಲೀಸರ ಭರ್ಜರಿ ಕಾರ್ಯಾಚರಣೆ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಐಮಂಗಲ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಅಂತರ್ ರಾಜ್ಯ ಕುಖ್ಯಾತ ಕಳ್ಳನ ಬಂಧಿಸಿರುವುದಲ್ಲದೆ 351 ಗ್ರಾಂ ತೂಕದ 26 ಲಕ್ಷದ 98 ಸಾವಿರ  ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಹನುಮಂತ ಅಲಿಯಾಸ್ ಬಳ್ಳಾರಿ ಹನುಮಂತ ಬಂಧಿತ ಆರೋಪಿ. ಕರ್ನಾಟಕ ಮತ್ತು ಆಂದ್ರ ರಾಜ್ಯದಲ್ಲಿ ಕಳ್ಳತನ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದಾನೆ ಎನ್ನಲಾಗಿದೆ.

- Advertisement - 

ಐಮಂಗಲ ಬಸ್ ನಿಲ್ದಾಣದ ಬಳಿ ಅನುಮಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದಾಗ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. DYSP ಶಿವಕುಮಾರ್, CPI ಎನ್. ಗುಡ್ಡಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು ಪೊಲೀಸರ ಕಾರ್ಯಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

 

- Advertisement - 

 

Share This Article
error: Content is protected !!
";