ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಸ್ತಿ ನೋಂದಣಿ ಶುಲ್ಕ 600%, ಪ್ರಾಪರ್ಟಿ ಗೈಡೆನ್ಸ್ ವ್ಯಾಲ್ಯೂ 30%, ವಾಹನ ನೋಂದಣಿ ಶುಲ್ಕ 10%, ಆಸ್ಪತ್ರೆಗಳ ಸೇವಾ ದರ 5%, ವಿದ್ಯುತ್ ದರ 14.5%, ಹಾಲಿನ ದರ 15%, ಬಸ್ ದರ 15% ಏರಿಕೆ ಸೇರಿದಂತೆ ಎಲ್ಲಾ ವಲಯಗಳಲ್ಲೂ ದರ ಏರಿಕೆ ಮಾಡಿರುವ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.
ಲೋಕೋಪಯೋಗಿ, ನೀರಾವರಿ, ಸಾರಿಗೆ ಇಲಾಖೆ ಸೇರಿದಂತೆ ಎಲ್ಲಾ ಸರ್ಕಾರಿ ಇಲಾಖೆಗಳಿಗೆ ತಮ್ಮ ವಿದ್ಯುತ್ ಬಿಲ್ ಪಾವತಿಸಲೂ ಸಾಧ್ಯವಾಗುತ್ತಿಲ್ಲ. ರಾಜ್ಯದ ಈ ಸ್ಥಿತಿಗೆ ಯಾರು ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ತಿಳಿಸಬೇಕು ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ ಮಾಡಿದ್ದಾರೆ.

