2 ಕೋಟಿ ಖರ್ಚು ಮಾಡಿ ತಾನು ಕಲಿತ ಸರ್ಕಾರಿ ಶಾಲೆಯನ್ನು ಮಾದರಿ ಶಾಲೆ ಮಾಡಿದ ಉದ್ಯಮಿ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು :
ತಾನು ಕಲಿತ ಸರ್ಕಾರಿ ಶಾಲೆಯನ್ನು ಮಾದರಿ ಶಾಲೆಯಾಗಿ ಅಭಿವೃದ್ಧಿಪಡಿಸಿ ಮಾದರಿಯಾದ ಉದ್ಯಮಿ ಮುದ್ರೆಮನೆ ಕಾಫಿ ಕ್ಯೂರಿಂಗ್ ಮಾಲೀಕರಾದ  ಬಿಎಸ್ ಸಂತೋಷ್. ಮೂಡಿಗೆರೆ ಸಮೀಪದಲ್ಲಿರುವ ಮುತ್ತಿಗೆರೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಯನ್ನು ಸುಮಾರು 2 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ 8 ಕೊಠಡಿ ಹಾಗು ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಮಾತ್ರವಲ್ಲದೆ ತನ್ನ ಮಗನನ್ನು ಕೂಡ ಇದೆ ಸರಕಾರಿ ಶಾಲೆಗೆ ಸೇರಿಸಿ ಓದಿಸುತ್ತಿದ್ದಾರೆ. ಶಾಲೆಯಲ್ಲಿ 363 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು,

- Advertisement - 

ಸರಕಾರಿ ಶಾಲೆಯನ್ನು ಖಾಸಗಿ ಶಾಲೆ ಮಾದರಿಯಲ್ಲಿ ಅಭಿವೃದ್ಧಿಪಡಿಸಿದ್ದು ಎಲ್ಲರ  ಮೆಚ್ಚುಗೆಗೆ ಪಾತ್ರವಾಗಿದೆ. ಸಂತೋಷ್ ಅವರ ಈ ಮಾದರಿ ಕಾರ್ಯ ಅನುಕರಣಾಯೋಗ್ಯ ಹಾಗು ಅಭಿನಂದನಾರ್ಹ ಎಂದು ರವಿ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";