ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ಕಡು ದಲಿತ ವಿರೋಧಿ ಎಂಬುದನ್ನು ಕರ್ನಾಟಕ ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ!! ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ದೂರಿದ್ದಾರೆ.
ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಜನಪರ ಉತ್ಸವಕ್ಕೆ ಜಿಲ್ಲೆಯ ಪರಿಶಿಷ್ಟ ಜಾತಿ ಶಾಸಕರಾದ ಕಾಂಗ್ರೆಸ್ನ ಎಸ್.ಎನ್.ನಾರಾಯಣಸ್ವಾಮಿ (ಬಂಗಾರಪೇಟೆ), ರೂಪಕಲಾ ಶಶಿಧರ್ (ಕೆಜಿಎಫ್) ಹಾಗೂ ಜೆಡಿಎಸ್ನ ಸಮೃದ್ಧಿ ಮಂಜುನಾಥ್ (ಮುಳಬಾಗಿಲು) ಗೈರಾಗಿದ್ದು, ತಮಗೆ ಆಹ್ವಾನವೇ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನವರೇ, ಕಾಂಗ್ರೆಸ್ನಾಯಕರಿಗೆ ದಲಿತರನ್ನು ಕಂಡರೆ ಈ ಪರಿ ದ್ವೇಷ ಏಕೆ? ದಲಿತರಿಗಾಗಿ ಮೀಸಲಿಟ್ಟದ್ದ ಹಣದಲ್ಲಿ ಉತ್ಸವ ನಡೆಸಲಾಗಿದ್ದು, ಜಿಲ್ಲೆಯ ಯಾವ ಪರಿಶಿಷ್ಟ ಶಾಸಕರನ್ನೂ ವಿಶಾಸಕ್ಕೆ ತೆಗೆದುಕೊಂಡಿಲ್ಲ ಎಂದು ಶಾಸಕರು ಆರೋಪಿಸಿದ್ದಾರೆ. ಬಜೆಟ್ ನಲ್ಲಿ ಜಿಲ್ಲೆಯ ಬೇಡಿಕೆಗಳೇನು ಎನ್ನುವ ಬಗ್ಗೆಯೂ ಶಾಸಕರ ಜೊತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪರಿಶಿಷ್ಟ ಸಮುದಾಯದ ಶಾಸಕರದ್ದೆ ಈ ಗತಿಯಾದರೆ ಇನ್ನು ಪರಿಶಿಷ್ಟ ಸಮುದಾಯಗಳ ಜನಸಾಮಾನ್ಯರ ಗತಿ ಏನು? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಪರಿಶಿಷ್ಟ ಸಮುದಾಯದ ಶಾಸಕರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ದಲಿತರ ವೋಟು ಬೇಕು, ಆದರೆ ದಲಿತರ ಅಭಿವೃದ್ಧಿ ಬೇಡ. ಇದು ಕಾಂಗ್ರೆಸ್ ಪಕ್ಷದ ಅಸಲೀಯತ್ತು ಎಂದು ಅಶೋಕ್ ವಾಗ್ದಾಳಿ ಮಾಡಿದ್ದಾರೆ.

