ತುಮಕೂರು ಜಿಲ್ಲೆಯ ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ತುಮಕೂರು:
ತೋಟಗಾರಿಕೆ ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿನ ೧೦ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ೨೦೨೫ರ ಮೇ ೨ ರಿಂದ ೨೦೨೬ರ ಫೆಬ್ರವರಿ ೨೮ರವರೆಗೆ ೧೦ ತಿಂಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು
, ಜಿಲ್ಲೆಯ ಅರ್ಹ ರೈತ ಮಕ್ಕಳು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು.  ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು. ಪ.ಜಾತಿ/ಪಂಗಡದ ಅಭ್ಯರ್ಥಿಗಳು ೧೮ ರಿಂದ ೩೩ ವರ್ಷ ಹಾಗೂ ಇತರರು ೧೮ ರಿಂದ ೩೦ ವರ್ಷ ವಯೋಮಾನದೊಳಗಿನವರಾಗಿರಬೇಕು.

- Advertisement - 

        ಅರ್ಜಿಯೊಂದಿಗೆ ಸಾಮಾನ್ಯ ಅಭ್ಯರ್ಥಿಗಳು ೩೦ ರೂ. ಹಾಗೂ ಪ.ಜಾತಿ/ಪಂಗಡದ ಅಭ್ಯರ್ಥಿಗಳು ೧೫ ರೂ.ಗಳ ಅರ್ಜಿ ಶುಲ್ಕವನ್ನು ಇಂಡಿಯನ್ ಪೋಸ್ಟಲ್ ಆರ್ಡರ್/ಡಿಮ್ಯಾಂಡ್ ಡ್ರಾಫ್ಟನ್ನು ತೋಟಗಾರಿಕೆ ಉಪನಿರ್ದೇಶಕರು(ಜಿ.ಪಂ.) ತುಮಕೂರು ಅವರ ಹೆಸರಿನಲ್ಲಿ ಪಡೆದು ಸಲ್ಲಿಸಬೇಕು.

ಅರ್ಜಿಯನ್ನು ಇಲಾಖಾ ವೆಬ್‌ಸೈಟ್ https://horticulturedir.karnataka.gov.in  ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾಜ್ಯವಲಯ), ತುಮಕೂರು ಇವರಿಂದ ಪಡೆದುಕೊಳ್ಳಬಹುದು.

- Advertisement - 

ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ ೧ರೊಳಗಾಗಿ ಸಲ್ಲಿಸಬೇಕು.  ತರಬೇತಿಗೆ ಆಯ್ಕೆ ಮಾಡಲು ಏಪ್ರಿಲ್ ೮ರಂದು ಬೆಳಿಗ್ಗೆ ೧೧ ಗಂಟೆಗೆ ಸಂದರ್ಶನವನ್ನು ಏರ್ಪಡಿಸಲಾಗಿದೆ.

        ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.೦೮೧೬-೨೨೭೮೬೪೭ನ್ನು ಸಂಪರ್ಕಿಸಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";