ಬಸವತತ್ವ ಮನುಷ್ಯ ಜಗತ್ತು ಇರುವವರೆಗೂ ದಾರಿ ದೀಪ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಸವತತ್ವ ಮನುಷ್ಯ ಜಗತ್ತು ಇರುವವರೆಗೂ ನಮಗೆ ದಾರಿ ದೀಪ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಚಿಕ್ಕಮಗಳೂರಿನ ಶ್ರೀ ಬಸವತತ್ವ ಪೀಠದ ಶ್ರೀ ಮ.ನಿ.ಪ್ರ. ಡಾ. ಬಸವ ಮರುಳಸಿದ್ದ ಸ್ವಾಮಿಗಳ ನೇತೃತ್ವದಲ್ಲಿ ನಡೆದ ಬಸವ ತತ್ವ ಸಮಾವೇಶ, ಶ್ರೀ ಮ. ನಿ. ಪ್ರ. ಚಂದ್ರಶೇಖರ ಮಹಾಸ್ವಾಮಿಗಳವರ 170ನೇ ಜಯಂತಿ, ಶ್ರೀ ಮ. ನಿ. ಪ್ರ. ಜಯಚಂದ್ರಶೇಖರ ಮಹಾಸ್ವಾಮಿಗಳವರ 29ನೇ ಸಂಸ್ಮರಣೆ ಮತ್ತು ಶ್ರೀಮಠದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

- Advertisement - 

12 ನೇ ಶತಮಾನದಲ್ಲಿ ವೃತ್ತಿ ಆಧಾರಿತ ಸಮುದಾಯಗಳ ಕುಲ ಕಸುಬುಗಳಿಂದ ಮಾತ್ರ ನೈಜ ಸಮಾಜ ನಿರ್ಮಾಣ ಸಾಧ್ಯ ಎಂದು ಜಗತ್ತಿಗೆ ತೋರಿಸಿಕೊಟ್ಟವರು ಅಣ್ಣ ಬಸವಣ್ಣನವರು. ಅವರ ಪ್ರೇರಣೆಯ ಹಾದಿಯಲ್ಲಿ ಮುನ್ನೆಡೆಯುತ್ತಿರುವ ನಮ್ಮ ಮಠಮಾನ್ಯಗಳು ಹಾಗೂ ಪರಮಪೂಜ್ಯರ ಕೈಂಕರ್ಯ ಕರುನಾಡಿನ ಹಿರಿಮೆಯಾಗಿರುವ ಕುರಿತು ವಿಜಯೇಂದ್ರ ಸ್ಮರಿಸಿದರು.

ಈ ಸಂದರ್ಭದಲ್ಲಿ ಪರಮಪೂಜ್ಯ ಜ್ಞಾನ ಪ್ರಭು ಸಿದ್ದರಾಮದೇಶೀಕೇಂದ್ರ ಶ್ರೀಗಳು, ಶ್ರೀ ಶಿವಶಂಕರ ಶಿವಯೋಗಿ ಶ್ರೀಗಳು, ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವರಾದ ಸಿ.ಟಿ ರವಿ, ಅಫೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಬೆಳ್ಳಿ ಪ್ರಕಾಶ್, ಶಾಸಕ ಹೆಚ್.ಡಿ.ತಮ್ಮಯ್ಯ, ಮಾಜಿ ಶಾಸಕ ರುದ್ರೇಗೌಡ, ಡಿ.ಎಸ್.ಸುರೇಶ್, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ, ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಮುಖಂಡರಾದ ನಿರಂಜನ್ ಕುಮಾರ್, ದೀಪಕ್ ದೊಡ್ಡಯ್ಯ ಸೇರಿದಂತೆ ಸಮಾಜದ ಗಣ್ಯರು, ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

- Advertisement - 

 

Share This Article
error: Content is protected !!
";