ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆರ್ಥಿಕ ಪರಿಸ್ಥಿತಿ ನೆಪವೊಡ್ಡಿ ಮಂಡ್ಯ ವಿವಿ ಸೇರಿದಂತೆ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿ ಮಂಡ್ಯ ಜಿಲ್ಲೆಯ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವಥ್ ನಾರಾಯಣ, ವಿಧಾನ ಪರಿಷತ್ ಸದಸ್ಯರಾದ ವಿವೇಕಾನಂದ, ಮಾಜಿ ಸಚಿವ ಕೆ ಸಿ ನಾರಾಯಣ ಗೌಡ, ಸಿ.ಎಸ್.ಪುಟ್ಟರಾಜು, ಮಾಜಿ ಎಂಎಲ್ಸಿ ಕೆ ಟಿ ಶ್ರೀಕಂಠೇಗೌಡ , ಬಿಜೆಪಿ ಮುಖಂಡರಾದ ಇಂಡುವಾಳು ಸಚ್ಚಿದಾನಂದ, ಅಶೋಕ್ ಜಯರಾಮ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಡಾ. ಇಂದ್ರೇಶ್, ಕಾರ್ಯದರ್ಶಿ ಟಿ ಶ್ರೀಧರ್, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ ರಮೇಶ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.

