ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಪಾಲರ ಅಧಿಕಾರಕ್ಕೆ ಮತ್ತು ಕುಲಾಧಿಪತಿ ಸ್ಥಾನಕ್ಕೆ ಕತ್ತರಿ ಹಾಕಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಭವನದಿಂದ ವಿಧಾನಸೌಧದ ವರೆಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಮ್ಮ ಶಾಸಕರು ಗಳೊಂದಿಗೆ ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಲಾಯಿತು. “ಪ್ರಜಾಪ್ರಭುತ್ವ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ” ಎಂದು ಎರಡೂ ಪಕ್ಷಗಳ ನಾಯಕರು ಹೇಳಿದರು.
ರಾಜ್ಯಪಾಲರ ಅಧಿಕಾರವನ್ನು ಉಚ್ಛ ನ್ಯಾಯಾಲಯ ಎತ್ತಿಹಿಡಿದರೂ ಜನವಿರೋಧಿ ವಿಧೇಯಕಗಳಿಗೆ ಸಹಿ ಹಾಕುವಂತೆ ರಾಜ್ಯಪಾಲರಿಗೆ ಒತ್ತಡ ಹೇರುತ್ತಾ, ರಾಜ್ಯಪಾಲರ ಕುಲಾಧಿಪತಿ ಸ್ಥಾನಕ್ಕೆ ಕತ್ತರಿ ಹಾಕಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಭವನದಿಂದ ವಿಧಾನಸೌಧದ ವರೆಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಮ್ಮ ಶಾಸಕರು ಗಳೊಂದಿಗೆ ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಿದರು.
ತನ್ನ ಭ್ರಷ್ಟಾಚಾರ, ದುರಾಡಳಿತ ಹಾಗೂ ಅಕ್ರಮಗಳನ್ನು ಮುಚ್ಚಿಕೊಳ್ಳಲು ಪದೇ ಪದೇ ರಾಜ್ಯಪಾಲರ ಹೆಸರಿನಲ್ಲಿ ನೀಚರಾಜಕಾರಣ ಮಾಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ನಿಲುವುಗಳು ಹಾಗೂ ದ್ವೇಷ ರಾಜಕಾರಣ ಖಂಡಿಸಲಾಯಿತು.
ಈ ಸಂದರ್ಭದಲ್ಲಿ ವಿರೋಧ ಪಕ್ಷ ನಾಯಕರಾದ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾದ ಸುರೇಶ್ ಬಾಬು ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮಾಜಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.

