ತೋಟಗಾರಿಕೆ ಕಿಸಾನ್ ಮಾಲ್ ಸ್ಥಾಪನೆಗೆ ಕ್ರಮ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತೋಟಗಾರಿಕೆ ಇಲಾಖೆ ವತಿಯಿಂದ ಬೀಜದಿಂದ ಮಾರುಕಟ್ಟೆಯವರಿಗಿನ ಸೇವೆಗಳನ್ನು ಒಂದೇ ಸೂರಿನಡಿ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ಒದಗಿಸಲು ತೋಟಗಾರಿಕೆ ಕಿಸಾನ್ ಮಾಲ್ಗಳನ್ನು ಸ್ಥಾಪಿಸಲಾಗುತ್ತಿದೆ. ಈವರೆಗೆ ರೈತರಿಗೆ 15.63ಲಕ್ಷ ಉತ್ತಮ ಗುಣಮಟ್ಟದ ಸಸಿಗಳನ್ನು ವಿತರಿಸಲಾಗಿದೆ.

ಅಗತ್ಯವಾದ ಯಂತ್ರೋಪಕರಣಗಳನ್ನು ಸಬ್ಸಿಡಿ ದರದಲ್ಲಿ ಜನರಿಗೆ ನೀಡಲಾಗಿದೆ. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ 16 ವಿವಿಧ ತೋಟಗಾರಿಕಾ ಬೆಳೆಗಳ ತಳಿಗಳನ್ನು ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಲಾಗಿರುತ್ತದೆ.

- Advertisement - 

ರಾಜ್ಯದ ರೈತ ಮತ್ತು ರೈತ ಉತ್ಪಾದಕರ ಸಂಸ್ಥೆಯಿಂದ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ಝೇಂಕಾರಎಂಬ ಹೆಸರಿನ ವಿಶೇಷ ಬ್ರ್ಯಾಂಡ್ ರೂಪಿಸಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

 

- Advertisement - 

Share This Article
error: Content is protected !!
";