ಚಿತ್ರದುರ್ಗ ಸಮೀಪ ಭೀಕರ ಅಪಘಾತ ಮೂವರ ಸಾವು

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಲಾರಿ ಮತ್ತು ಟ್ರಕ್ ಗಳ ಮಧ್ಯ ನಡೆದ ಭೀಕರ ರಸ್ತೆ ಅಪಘಾತದಲ್ಲಿ
ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಟ್ರಕ್​ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್​​ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿಯೊಂದರ ಟೈಯರ್ ಸ್ಫೋಟಗೊಂಡ ಪರಿಣಾಮ ರಸ್ತೆ ಬದಿ ಕೆಟ್ಟು ನಿಂತಿತ್ತು. ಚಾಲಕ ಅದರಿಂದ ಇಳಿದು ಬೇರೆ ಟೈರ್ ಅಳವಡಿಸುವ ಕೆಲಸ ಮಾಡುತ್ತಿದ್ದರು. ಅಷ್ಟರಲ್ಲಿ, ಹೆದ್ದಾರಿಯಲ್ಲಿ ಬಂದ ಮತ್ತೊಂದು ಲಾರಿ ಅದಕ್ಕೆ ಡಿಕ್ಕಿಯಾಗಿದೆ. ಹಿಂದಿನಿಂದ ಬಂದ ಟ್ರಕ್ ಕೂಡ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -  - Advertisement - 
Share This Article
error: Content is protected !!
";