ಬೆಸ್ಕಾಂ ಸ್ಮಾರ್ಟ್ ಮೀಟರ್ ಬೆಲೆ ಏರಿಕೆಗೆ ಖಂಡನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರವೊಂದು ಆರ್ಥಿಕ ದಿವಾಳಿಯಾದರೆ ಮಾತ್ರ ಇಂತಹ ದಿಗಿಲು ಹುಟ್ಟಿಸುವ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.

ಬೆಸ್ಕಾಂ ಸಂಸ್ಥೆ ತನ್ನ ವ್ಯಾಪ್ತಿಯಲ್ಲಿ ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಶೇ 400-800 ರಷ್ಟು ದರ ಏರಿಕೆ ಮಾಡಿರುವ ನಿರ್ಧಾರ ಪ್ರಕಟಿಸಿರುವುದು ಕೇವಲ ವಿದ್ಯುತ್ ಶಾಕ್ ಅಲ್ಲ, ಜನ ಸುಲಿಗೆಯ ಲೂಟಿಕೋರತನವಾಗಿದೆ ಎಂದು ಅವರು ವಾಗ್ದಾಳಿ ಮಾಡಿದ್ದಾರೆ.

- Advertisement - 

ಬೆಸ್ಕಾಂ ಜಾರಿಗೆ ತಂದಿರುವ ದರವನ್ನೇ ರಾಜ್ಯದ ಇತರ ಎಸ್ಕಾಂ ಗಳ ವ್ಯಾಪ್ತಿಯಲ್ಲೂ ಜಾರಿ ಮಾಡುವುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಹೇಳಿದ್ದಾರೆ. ಈಗಾಗಲೇ ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ ಒದಗಿಸಲಾಗಿರುವ ವಿದ್ಯುತ್ ಸೇವೆಗೆ ಸರ್ಕಾರ ಹಣ ಒದಗಿಸದಿದ್ದರೆ ಹಣವನ್ನು ಫಲಾನುಭವಿಗಳಿಂದ ವಸೂಲಿ ಮಾಡುವುದಾಗಿ ಹೇಳಿ ಎಸ್ಕಾಂ ಅಧಿಕಾರಿಗಳು ಸರ್ವಸನ್ನದ್ಧರಾಗಿ ನಿಂತಿದ್ದಾರೆ,

ಇದರ ನಡುವೆಯೇ ಸ್ಮಾರ್ಟ್ ಮೀಟರ್ ಹೆಸರಿನಲ್ಲಿ ಅವೈಜ್ಞಾನಿಕವಾಗಿ ಶೇ 400 ರಿಂದ 800 ರಷ್ಟು ದರ ಏರಿಕೆ ಮಾಡಿರುವ ಕ್ರಮ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕಲ್ಪಿಸಿಕೊಳ್ಳಲೂ ಸಾಧ್ಯವಾಗದ ತುಘಲಕ್ ನಿರ್ಧಾರವಾಗಿದೆ ಎಂದು ವಿಜಯೇಂದ್ರ ಹರಿಹಾಯ್ದಿದ್ದಾರೆ.
ಸರ್ಕಾರದ ಆರ್ಥಿಕ ಸ್ಥಿತಿ ದಿವಾಳಿಯಾಗಿರುವುದರ ಸ್ಪಷ್ಟ ಸೂಚನೆ ಇಂತಹ ಜನವಿರೋಧಿ ಆರ್ಥಿಕ ನಿರ್ಧಾರಗಳಿಂದ ವ್ಯಕ್ತವಾಗುತ್ತಿದೆ. ಸ್ಮಾರ್ಟ್ ಮೀಟರ್ ದರದ ಹೇರಿಕೆಯನ್ನು ಈ ಹಿಂದಿನಂತೆ ನಿಗದಿಪಡಿಸದೇ ಹೋದರೆ ಜನರ ಆಕ್ರೋಶ ಎದುರಿಸಲು ಕರ್ನಾಟಕ ಕಾಂಗ್ರೆಸ್
ಸರ್ಕಾರ ಸಿದ್ಧವಾಗಲಿ ಎಂದು ಅವರು ತಾಕೀತು ಮಾಡಿದ್ದಾರೆ.

- Advertisement - 

 

Share This Article
error: Content is protected !!
";