ಕರ್ನಾಟಕ ಬಜೆಟ್‌ಅನ್ನು ಇಸ್ಲಾಮೀಕರಣಗೊಳಿಸಿರುವ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಬಜೆಟ್‌ಅನ್ನು ಇಸ್ಲಾಮೀಕರಣಗೊಳಿಸಿರುವ ಸಿಎಂ ಸಿದ್ದರಾಮಯ್ಯ
ಅವರೆ, ಬಜೆಟ್‌ನಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳಿಗೆ ನೀವು ಕೊಟ್ಟಿರುವುದು ಕೇವಲ ಚಿಪ್ಪು ಮಾತ್ರ!! ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ, ಮುಸ್ಲಿಮರ ಸರಳ ಮದುವೆಗೆ ₹50 ಸಾವಿರ, ವಕ್ಫ್‌, ಖಬರಸ್ಥಾನಗಳ ಮೂಲಸೌಕರ್ಯಕ್ಕೆ ₹150 ಕೋಟಿ, ಮುಸ್ಲಿಮರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ₹50 ಲಕ್ಷ, ಮುಸ್ಲಿಮರು ಅತಿಹೆಚ್ಚು ವಾಸವಿರುವ ಪ್ರದೇಶದಲ್ಲಿ ITI ಸ್ಥಾಪನೆ, KEA ಅಡಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಶುಲ್ಕ‌ಕಡಿತ, ಉಲ್ಲಾಳದಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ವಸತಿ ಸಹಿತ ಪಿ.ಯು ಕಾಲೇಜು, ಮುಸ್ಲಿಂ ವಿದ್ಯಾರ್ಥಿಗಳ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ ಏರಿಕೆ, ಬೆಂಗಳೂರಿನ ಹಜ್‌ಭವನದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣ

- Advertisement - 

ಮುಸ್ಲಿಮ್‌ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ, ದೇಶದ ಯಾವುದೇ ರಾಜ್ಯದಲ್ಲೂ ಇಲ್ಲದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ದಿವಾಳಿ ಮಾಡೆಲ್‌ಜಾರಿ ಆಗುತ್ತಿದೆ ಎಂದು ಬಿಜೆಪಿ ಹರಿಹಾಯ್ದಿದೆ.

ಭಂಡ ಹಾಗೂ ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಸಂವಿಧಾನ ವಿರೋಧಿ  ಬಜೆಟ್ ನ ವೈಶಿಷ್ಟ್ಯಗಳು. ಬಜೆಟ್‌ನಲ್ಲಿಯೂ ಸಹ ಮುಂದುವರೆದ ಒಲೈಕೆ ರಾಜಕಾರಣ ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಹೆಚ್ಚು ಸಾಲ ಮಾಡಿರುವ ಆರ್ಥಿಕ ವರ್ಷ ಎಂಬ ಕುಖ್ಯಾತಿ. ಸರ್ಕಾರ ಮಾಡಿರುವ ಸಾಲ ಉತ್ಪಾದಕ ವಲಯಕ್ಕೆ ಪೂರಕವಾಗಿರದೇ, ಅನುತ್ಪಾದಕ ವಲಯಕ್ಕೆ ಮೀಸಲು ರಾಜ್ಯದ ಆದಾಯವನ್ನು ಹೆಚ್ಚಿಸಲು ಯಾವುದೇ ಉಪಕ್ರಮಗಳನ್ನು ಘೋಷಿಸದೇ, ಕೇವಲ ಸಾಲದ ಹೊರೆ ಹೆಚ್ಚಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

- Advertisement - 

 

Share This Article
error: Content is protected !!
";