ಚಿತ್ರದುರ್ಗದ ತಮಟಕಲ್ಲು ಸಮೀಪ ಭೀಕರ ಅಪಘಾತಕ್ಕೆ ಐವರ ಸಾವು

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ
ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಮತ್ತು ತಮಟಕಲ್ಲು ಗ್ರಾಮದ ಮಧ್ಯ ಸಂಭವಿಸಿದೆ.
ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಕಾರು ಚಲಿಸುತ್ತಿರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಅಪಘಾದಲ್ಲಿ ಮೃತರು ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(
60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ(50), ಚಿದಂಬರಚಾರ್(52) ಎಂದು ಗುರುತಿಸಲಾಗಿದೆ.
ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ಅಪಘಾತಕ್ಕಿಡಾದ ಕಾರಿನಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪ್ರಸಾದ ಪತ್ತೆಯಾಗಿದ್ದು ಇವರೆಲ್ಲರೂ ಸವದತ್ತಿಯ ರೇಣುಕಾ ಯಲ್ಲಮ್ಮ‌ ದೇಗುಲಕ್ಕೆ ಹೋಗಿ ವಾಪಸ್ ಬೆಂಗಳೂರಿಗೆ ಹಿಂದಿರುಗುತ್ತಿದ್ದರು ಎನ್ನಲಾಗಿದೆ.
ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನ್ನೊವಾ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಎಸ್ಪಿ ರಂಜಿತ್ ಕುಮಾರ್ ಬಂಡಾರು ಮಾಧ್ಯಮಗಳಿಗೆ ಮಾತನಾಡಿ ಚಿತ್ರದುರ್ಗ ಹೊರ ವಲಯದ ತಮಟಕಲ್ಲು ಬಳಿ ರಾಷ್ಟ್ರೀಯ ಹೆದ್ದಾರಿ
48ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ರಸ್ತೆಯ ಎಡಬದಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಬಂದು ಗುದ್ದಿದೆ. ಅಪಘಾತ ಸ್ಥಳ ನೋಡಿದರೆ ಕಾರು ಬ್ರೇಕ್ ಬಳಸಿದಂತೆ ಕಾಣುತ್ತಿಲ್ಲ ಎಂದು ಮಾಹಿತಿ ನೀಡಿದರು.

ಕಾರಲ್ಲಿದ್ದ ಐವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರವಾಗಿದೆ. ಕಾರ್ ಚಾಲಕನ ನಿರ್ಲಕ್ಷ, ಓವರ್ ಸ್ಪೀಡ್ ನಿಂದ ಅಪಘಾತ ಸಂಭವಿಸಿರಬಹುದೆಂದು ಎಸ್ಪಿ ಅವರು ಶಂಕಿಸಿದ್ದಾರೆ.

- Advertisement -  - Advertisement - 
Share This Article
error: Content is protected !!
";