ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕಾಂಗ್ರೆಸ್‌ಸರ್ಕಾರದ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲ ಎಂಬಂತಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದರು. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನಲ್ಲಿ ವಿದೇಶಿ ಪ್ರವಾಸಿಗರ ಮೇಲೆ ಹಲ್ಲೆ
, ಅತ್ಯಾಚಾರ ನಡೆಸಿರುವುದು ಕರ್ನಾಟಕದ ಘನತೆ, ಗೌರವಕ್ಕೆ ಮಸಿ ಬಳಿದಿದ್ದು, ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆಗೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ.

ಸಿಎಂ ಸಿದ್ದರಾಮಯ್ಯ ಅವರೇ, ಇಡೀ ದೇಶದಲ್ಲೇ ದಕ್ಷತೆಗೆ ಹೆಸರಾಗಿದ್ದ ಕರ್ನಾಟಕ ಪೋಲೀಸರ ಕೈ ಕಟ್ಟಿ ಕರ್ನಾಟಕವನ್ನು ಅಪರಾಧಗಳ ನಾಡನ್ನಾಗಿ ಮಾಡಿದ್ದೀರ. ಮಹಿಳೆಯರಿಗೆ ಸುರಕ್ಷತೆ ನೀಡಲಾಗದ ಸರ್ಕಾರವಿದ್ದು ಏನು ಪ್ರಯೋಜನ? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";