ಮಾರ್ಚ್ 14 ರಂದು ಯೋಗಿನಾರೇಯಣ ಯತೀಂದ್ರರ  ಜಯಂತಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ  ತಾತಯ್ಯ) ಜಯಂತಿ ಆಚರಣೆ ಸಮಾರಂಭ ಇದೇ ಮಾರ್ಚ್ 14ರಂದು ಬೆಳಿಗ್ಗೆ 11 ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

      ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು.  ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಸಂಸದ ಗೋವಿಂದ ಎಂ. ಕಾರಜೋಳ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ. ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್ ಭಾಗವಹಿಸುವರು.

- Advertisement - 

ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷೆ ಸವಿತಾ ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾ ಶ್ರೀ ಯೋಗಿನಾರೇಯಣ ಯತೀಂದ್ರ ಬಲಿಜ ಸಂಘದ ಅಧ್ಯಕ್ಷ ಎಂ.ಎ.ಸೇತುರಾಮ್, ಕಾರ್ಯದರ್ಶಿ ಎಂ.ಗಂಗಣ್ಣ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ಎಂ.ಜಿ.ಸೂರ್ಯನಾರಾಯಣ, ಶ್ರೀ ಯೋಗಿನಾರೇಯಣ ಸೌಹಾರ್ದ ಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ  ಎಂ.ಕೆ.ಪ್ರಹ್ಲಾದ್, ಬೊಮ್ಮೇನಹಳ್ಳಿಯ ಶ್ರೀ ಯೋಗಿನಾರೇಯಣ ಯತೀಂದ್ರ ವಿದ್ಯಾಸಂಸ್ಥೆ ಅಧ್ಯಕ್ಷ  ಎಂ.ವಿ.ರಾಮದಾಸಪ್ಪ, ಬೊಮ್ಮೇನಹಳ್ಳಿ ಶ್ರೀ ಯೋಗಿನಾರೇಯಣ ಯತೀಂದ್ರ ಬಲಿಜ ಸಂಘ ಅಧ್ಯಕ್ಷ ವಿರೂಪಾಕ್ಷಪ್ಪ ಭಾಗವಹಿಸುವರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಕಾರ್ಯದರ್ಶಿ ಹುರುಳಿ ಎಂ.ಬಸವರಾಜ್ ಉಪನ್ಯಾಸ ನೀಡುವರು. ಚಳ್ಳಕೆರೆ ಮುತ್ತುರಾಜ್ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ.
ಜಯಂತಿ ಅಂಗವಾಗಿ ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದಿಂದ ತರಾಸು ರಂಗಮಂದಿರದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ.ಎಂ. ಗುರುನಾಥ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";