ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ ಜಾಹೀರಾತು ಫಲಕ, ಹೋಡಿರ್ಂಗ್ಸ್‍ಗಳನ್ನು ಅಧಿಕೃತವಾಗಿ ಅಳವಡಿಸಲು, ನಗರಸಭೆಯಲ್ಲಿ ಪೂರ್ವಾನುಮತಿ ಪಡೆದು ನಿಗದಿತ ಶುಲ್ಕ ಪಾವತಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಳವಡಿಸಿಕೊಳ್ಳಲು ನಿಗಧಿತ ಸ್ಥಳಗಳನ್ನು ಗುರುತಿಸಿ, ಅಧಿಸೂಚನೆ ಹೊರಡಿಸಲಾಗಿದೆ.
ಆದಾಗ್ಯೂ ಸಾರ್ವಜನಿಕರು ಅಧಿಸೂಚನೆಯಲ್ಲಿ ನಿಗಧಿಪಡಿಸಿದ ಸ್ಥಳಗಳಲ್ಲಿ ನಗರಸಭೆಯಿಂದ ಅನುಮತಿ ಪಡೆಯದೇ ಅನಧಿಕೃತವಾಗಿ ಜಾಹೀರಾತುಗಳನ್ನು ಅಳವಡಿಸಿಕೊಳ್ಳುತ್ತಿರುವುದು ಹಾಗೂ ಕರ್ನಾಟಕ ಬಹಿರಂಗ ಸ್ಥಳಗಳನ್ನು ವಿರೂಪಗೊಳಿಸುವುದನ್ನು ಪ್ರತಿಬಂಧಿಸುವ ಅಧಿನಿಯಮ 1981 (1982 ಅಧಿನಿಯಮ ಸಂಖ್ಯೆ 35)ಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರಸಭೆಯಿಂದ ಅನುಮತಿ ಪಡೆಯದೇ ಅನಧಿಕೃತವಾಗಿ ಜಾಹೀರಾತು ಪ್ರಚುರಪಡಿಸಿದವರ ಮೇಲೆ ಎರಡು ಪ್ರಕರಣಗಳನ್ನು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಕಾನೂನು ರೀತ್ಯಾ ಕ್ರಮಕೈಗೊಳ್ಳಲು ದೂರು ದಾಖಲಿಸಲಾಗಿದೆ.
ಸಾರ್ವಜನಿಕರು ಇನ್ನು ಮುಂದೆ ನಗರಸಭೆಯಿಂದ ಅನುಮತಿ ಪಡೆದು, ನಿಗದಿಪಡಿಸಿದ ಸ್ಥಳಗಳಲ್ಲಿ ಜಾಹೀರಾತುಗಳನ್ನು ಪ್ರಚುರಪಡಿಸಬೇಕು. ಒಂದು ವೇಳೆ ನಗರಸಭೆಯಿಂದ ಅನುಮತಿ ಇಲ್ಲದೇ ಪ್ರಚುರಪಡಿಸಿದಲ್ಲಿ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.