ಮುಸ್ಲಿಮರಿಗೆ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿಗೆ ಬೇಡಿಕೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಿದ ಬೆನ್ನ ಹಿಂದೆಯೇ ಮುಸ್ಲಿಮರಿಗೆ ಶೇ 4 ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಶೇ 10ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆಯನ್ನು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಇಂಜಿನಿಯರ್ಸ್ ಅಸೋಸಿಯೇಷನ್‌ಮನವಿ ಸಲ್ಲಿಕೆ ಮಾಡಿತ್ತು.

ಈ ಬೇಡಿಕೆ ಸಂಬಂಧ ಕ್ರಮ ವಹಿಸುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮೀಸಲಾತಿ ಶೇ 10ಕ್ಕೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್​ಗೆ ಸಂಘಟನೆಗಳು ಮನವಿ ಮಾಡಿದ್ದವು. ಈ ಮನವಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಸಚಿವ ಜಮೀರ್ ವಿಶೇಷ ಕರ್ತವ್ಯಾಧಿಕಾರಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಮುಸ್ಲಿಮರಿಗೆ ಶೇ 10ಕ್ಕೆ ಮೀಸಲಾತಿ ಹೆಚ್ಚಿಸಲು ಪರಿಶೀಲಿಸಿ
, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಚಿವರು ನಿರ್ದೇಶಿಸಿರುತ್ತಾರೆ ಎಂದು ಜಮೀರ್ ಅಹ್ಮದ್ ಅವರ ವಿಶೇಷ ಕರ್ತವ್ಯಾಧಿಕಾರಿ ಬರೆದ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲೀಮರನ್ನು ಅತಿಯಾಗಿ ಓಲೈಕೆ ಮಾಡುತ್ತಾರೆ ಎಂಬ ಪ್ರತಿಪಕ್ಷ ಬಿಜೆಪಿ ಆರೋಪದ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗುವ ಸುಳಿವು ದೊರೆತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2025-26ನೇ ಸಾಲಿನ ಬಜೆಟ್​ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಭರ್ಜರಿ ಕೊಡುಗೆ ನೀಡಿದ್ದರು. ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೂ ಶೇ 4ರಷ್ಟು ಮೀಸಲಾತಿ ಕಲ್ಪಿಸಿ ಘೋಷಣೆ ಮಾಡಿದ್ದರು. ಈಗ ಶೇ.10ರಷ್ಟು ಮೀಸಲಾತಿ ನೀಡಿದರೆ ಇದು ಆಡಳಿತ ರೂಢ ಸರ್ಕಾರ, ವಿರೋಧ ಪಕ್ಷಗಳ ಸಂಘರ್ಷಕ್ಕೆ ಎಡೆ ಮಾಡಿಕೊಡುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.

 

- Advertisement -  - Advertisement - 
Share This Article
error: Content is protected !!
";