ಚಂದ್ರವಳ್ಳಿ ನ್ಯೂಸ್, ತುಮಕೂರು:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೀಡುವ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ ೩೧ರವರೆಗೆ ವಿಸ್ತರಿಸಿದೆ.
ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ https://ssp.postmatric.karnataka.gov.in ಮೂಲಕ ಮಾರ್ಚ್ ೩೧ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫, ದೂ.ವಾ.ಸಂ.೧೯೦೨ನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.