ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ರೈತರಿಗೆ ೨೦೨೪-೨೫ನೇ ಸಾಲಿನ ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆಯೆಂದು ಸಹಾಯಕ ಕೃಷಿ ನಿರ್ದೇಶಕ ಎಂ.ವಿ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲಾ ಹೋಬಳಿಯ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್‌ಕಾರ್ಡ್, ಎಫ್.ಐ.ಡಿ ಸಂಖ್ಯೆ, ಕೊಳವೆಬಾವಿ ದೃಢೀಕರಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದ ದಾಖಲಾತಿಗಳೊಂದಿಗೆ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಿಗೆ ಅರ್ಜಿ ಸಲ್ಲಿಸುವುದು. ಮೊದಲು ಬಂದ ಅರ್ಜಿಗಳನ್ನು ಆದ್ಯತೆ ಮೇರೆಗೆ ಆಯ್ಕೆ ಪರಿಗಣಿಸಲಾಗುವುದು.
ಐದು ಎಕರೆ ಜಮೀನಿಗಿಂತ ಹೆಚ್ಚು ಜಮೀನು ಹೊಂದಿದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರು ಈ ಹಿಂದೆ ಸೌಲಭ್ಯ ಪಡೆದಿದ್ದರು ಸಹ ಇನ್ನೊಂದು ತುಂತುರು ನೀರಾವರಿ ಘಟಕ ಪಡೆಯಲು ಅರ್ಹರಾಗಿರುತ್ತಾರೆ. ಇದರ ಸದುಪಯೋಗವನ್ನು ರೈತರು ಹೆಚ್ಚಿನದಾಗಿ ಬಳಸಿಕೊಳ್ಳಲು ಸಹಾಯಕ ಕೃಷಿ ನಿರ್ದೇಶಕ ಎಂ.ವಿ ಮಂಜುನಾಥ್ ಕರೆ ನೀಡಿದ್ದಾರೆ.