ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರಿನ ವಿಘ್ನೇಶ್ವರ ಕಂಫರ್ಟ್ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸೇನೆ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಮಾಜ ಸೇವಕ ನಟರಾಜು ಅವರನ್ನು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಸನ್ಮಾನಿಸಿ ಗೌರವಿಸಿದರು.
ಜಿಲ್ಲಾ ಕನ್ನಡ ಸೇನೆ ಅಧ್ಯಕ್ಷ ಧನಿಯಾಕುಮಾರ್, ಉದ್ಯಮಿ ಎಂ.ಕೆ.ವೆಂಕಟಸ್ವಾಮಿ, ಹಿರಿಯ ಕ್ರೀಡಾಪಟು ಟಿ.ಕೆ.ಆನಂದ್, ವಕೀಲ ಆರ್.ಎನ್.ವೆಂಕಟಾಚಲ, ಕರಾಟೆ ಶಿಕ್ಷಕ ಕರಾಟೆ ಕೃಷ್ಣಮೂರ್ತಿ, ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಲಕ್ಷ್ಮಣ್, ಮುಖಂಡ ಕೊಪ್ಪಳ್ ನಾಗರಾಜು, ಸವಿತಾ ಸಮಾಜ ಜಿಲ್ಲಾಧ್ಯಕ್ಷ ಮಂಜೇಶ್ ಒಲಿಂಪಿಕ್, ಲಕ್ಷ್ಮೀಕಾಂತರಾಜೇ ಅರಸು, ಗುರು ರಾಘವೇಂದ್ರ, ಉದಯ್, ಸಂತೋಷ್, ರಾಮಚಂದ್ರರಾವ್, ಶಬ್ಬೀರ್ ಅಹ್ಮದ್, ಮೀಸೆ ಸತೀಶ್, ಹೊಸಕೋಟೆ ನಟರಾಜ್ ಮೊದಲಾದವರು ಭಾಗವಹಿಸಿದ್ದರು.