ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಂದೆಡೆ ಅನುದಾನ ಕೊಡಲು ಹಣವಿಲ್ಲದೆ ವಿಶ್ವವಿದ್ಯಾಲಯ ಮುಚ್ಚುವ ಸರ್ಕಾರ, ಮತ್ತೊಂದೆಡೆ ಸರ್ಕಾರಿ ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆಯನ್ನು ಸಹ ಖಾಲಿಯಿಟ್ಟಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಬಿಜೆಪಿ ದೂರಿದೆ.
ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಗೆ ಬರುವ 440 ಸರ್ಕಾರಿ ಪದವಿ ಕಾಲೇಜುಗಳ ಪೈಕಿ 412 ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆಗಳು ಮಂಜೂರಾಗಿದ್ದು, ಎಲ್ಲಾ ಹುದ್ದೆಗಳು ಖಾಲಿ ಉಳಿದಿವೆ.
ಕಾಲೇಜುಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಿಕ್ಷಣ ಇಲಾಖಾ ವ್ಯಾಪ್ತಿಗೆ ಬರುವ ಎಲ್ಲಾ ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆ ಭರ್ತಿ ಮಾಡಲು ಸರ್ಕಾರ ಅದಷ್ಟು ಶೀಘ್ರದಲ್ಲಿ ಕ್ರಮ ವಹಿಸಬೇಕು ಎಂದು ಬಿಜೆಪಿ ಆಗ್ರಹ ಮಾಡಿದೆ.