ಸಿ ವಿ ರಾಮನ್ ವಿಧಾನಸಭಾ ಕ್ಷೇತ್ರದಲ್ಲಿ ಸಭೆ ನಡೆಸಿದ ಉಸ್ತುವಾರಿ ಭವ್ಯ ನರಸಿಂಹಮೂರ್ತಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರದ ಸಿ ವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಭವ್ಯ ನರಸಿಂಹಮೂರ್ತಿ ನೇಮಕಗೊಂಡ ಬೆನ್ನಲ್ಲೇ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

- Advertisement - 

ಇಂದು ಬೆಳಗ್ಗೆ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಪಕ್ಷ ಸಂಘಟನೆ ಕುರಿತು ಮುಖಂಡರು, ಕಾರ್ಯಕರ್ತರೊಂದಿಗೆ ಮಾತನಾಡಿದರು.

- Advertisement - 

ಈ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗೂ ಬೆಂಗಳೂರು ಸೆಂಟ್ರಲ್ ಲೋಕ ಸಭಾ ಚುನಾವಣಾ ಅಭ್ಯರ್ಥಿ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ಉಪಾಧ್ಯಕ್ಷ ಆರ್.ಮಂಜುನಾಥ್, ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್,

- Advertisement - 

ಬೆಂಗಳೂರು ಪೂರ್ವ ಜಿಲ್ಲಾ ಡಿಸಿಸಿ ಅಧ್ಯಕ್ಷ ನಂದಕುಮಾರ್, ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ಆನಂದ್ ಕುಮಾರ್ ಎಸ್ ಸೇರಿದಂತೆ ಕ್ಷೇತ್ರದ ಎಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share This Article
error: Content is protected !!
";