ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಟ್ಟು ಬೋಲ್ಟುಗಳನ್ನು ಕಳಚುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ದೆಹಲಿ ದಂಡಯಾತ್ರೆಗೆ ಹೊರಟಿದ್ದಾರೆ ಎಂದು ಬಿಜೆಪಿ ಅನುಮಾನ ವ್ಯಕ್ತಪಡಿಸಿದೆ.
ಅಕ್ಟೋಬರ್-ನವೆಂಬರ್‌ಅಂತ್ಯಕ್ಕೆ ಸಿಎಂ ಸ್ಥಾನದ Expiry ಡೇಟ್ ಇದ್ದು ಅದನ್ನು ವಿಸ್ತರಿಸಲು ಹಾಗೂ ಕೆಪಿಸಿಸಿ ಹುದ್ದೆಯಿಂದ ಡಿಕೆಶಿ ಇಳಿಸಿ ತಮ್ಮ ಆಪ್ತರನ್ನು ನೇಮಕ ಮಾಡಲು ಹೈಕಮಾಂಡ್ ಬಳಿ ಬೇಡಿಕೆ ಇಡಲಿದ್ದಾರೆ. ತಮ್ಮ ಆಪ್ತ ಸತೀಶ್ ಜಾರಕಿಹೊಳಿ ಮೂಲಕ ಡಿಕೆಶಿ ವಿರುದ್ಧ ನೇರ ಸಮರ ಸಾರಿದ್ದಾರೆ.
ಸಿಎಂ ಕುರ್ಚಿಗೆ ಕಣ್ಣಿಟ್ಟಿದ್ದ ಡಿಕೆಶಿಗೆ ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೇ ಉಳಿಸಿಕೊಳ್ಳುವ ಸವಾಲು ಎದುರಾಗಲಿದೆ ಎಂದು ಬಿಜೆಪಿ ಭವಿಷ್ಯ ನುಡಿದಿದೆ.