ಆಯುಷ್ಮಾನ್ ಭಾರತ್‌ ದಿವಸ್ ಆಚರಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಯುಷ್ಮಾನ್ ಭಾರತ್ ದಿನ” ವಿಶ್ವದ ಅತಿ ದೊಡ್ಡ ಆರೋಗ್ಯ ರಕ್ಷಣೆ ಯೋಜನೆಯಾದ ಪ್ರಧಾನಮಂತ್ರಿ ಜನ್‌ಆರೋಗ್ಯ ಯೋಜನೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಆಯುಷ್ಮಾನ್ ಭಾರತ್‌ದಿವಸ್ ಅನ್ನು ಆಚರಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.

- Advertisement - 

5 ಲಕ್ಷ ರೂಗಳ ವರೆಗಿನ ಉಚಿತ ವೈದ್ಯಕೀಯ ಸೇವೆಯನ್ನು ಜನರಿಗೆ ತಲುಪಿಸಿ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಹೆಮ್ಮೆಯ ಪ್ರಧಾನಿ  ನರೇಂದ್ರ ಮೋದಿ ಅವರ ಸರ್ಕಾರದ ಆಯುಷ್ಮಾನ್ ಯೋಜನೆಯು ಬಡ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ವರದಾನವಾಗಿದೆ ಎಂದು ಅವರು ತಿಳಿಸಿದರು.

- Advertisement - 

ಹಣವಿಲ್ಲದ ಕಾರಣಕ್ಕೆ ಆರೋಗ್ಯ ಸೇವೆಗಳಿಂದ ವಂಚಿತರಾಗುವ ಅಥವಾ ಆರೋಗ್ಯ ಸಮಸ್ಯೆಯ ಕಾರಣಕ್ಕೆ ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುವ ಸಂದಿಗ್ಧ ಸ್ಥಿತಿಯನ್ನು ದೂರಗೊಳಿಸುತ್ತಿದೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

- Advertisement - 

 

Share This Article
error: Content is protected !!
";