ಒಳಮೀಸಲಾತಿ ವರ್ಗೀಕರಣಕ್ಕೆ ಸರ್ಕಾರ ಬದ್ಧ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತು ಸಮಗ್ರ ಸಮೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯಲ್ಲಿ ಪಾಲ್ಗೊಂಡರು.

- Advertisement - 

ಮೂಲ ಜಾತಿಗಳ ದಾಖಲೀಕರಣ ಮತ್ತು ಒಳಮೀಸಲಾತಿ ವರ್ಗೀಕರಣಕ್ಕಾಗಿ ಇಂದಿನಿಂದ ಮೇ 23 ರವರೆಗೆ ಒಟ್ಟು ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ಗಣತಿ ನಡೆಯಲಿದೆ.

- Advertisement - 

ಪ್ರತಿ ಮನೆಗೂ ಭೇಟಿ ನೀಡಿ, ಇ- ಆಡಳಿತ ಇಲಾಖೆ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ 101 ಪರಿಶಿಷ್ಟ ಜಾತಿಯ ಕುಟುಂಬಗಳ ಮೂಲಜಾತಿ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕ ದತ್ತಾಂಶಗಳನ್ನು ಸಂಗ್ರಹಿಸಲಾಗುವುದು. ನಮ್ಮ‌ಸರ್ಕಾರ ಒಳಮೀಸಲಾತಿ ಜಾರಿಗೆ ಬದ್ಧವಾಗಿದೆ ಎಂದು ಶಿವಕುಮಾರ್ ತಿಳಿಸಿದರು.

 

- Advertisement - 

 

 

 

Share This Article
error: Content is protected !!
";