ಮೇ.8 ರಂದು ನೇರ ಸಂದರ್ಶನ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಜಿಲ್ಲಾ
ಉದ್ಯೋಗ ವಿನಿಮಯ ಕೇಂದ್ರ ಕಚೇರಿಯಲ್ಲಿ ಮೇ.8 ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಖಾಸಗಿ ಕಂಪನಿಯಾದ ಬಿ.ಎಸ್.ಎಸ್,ಮೈಕ್ರೋ ಫೈನನ್ಸ್ ಲಿ.ಚಿಕ್ಕಮಗಳೂರು ತನ್ನಲ್ಲಿ ಖಾಲಿ ಇರುವ(ಟಿಸಿಒ ಮತು ಸಿಒ) ಹುದ್ದೆಗೆ ನೇರ ಸಂದರ್ಶನವನ್ನು ಏರ್ಪಡಿಸಿದ್ದಾರೆ.

- Advertisement - 

ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ೧೮ ರಿಂದ ೩೦ ವರ್ಷ ವಯೋಮಿತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶವಿದ್ದು, ಅಭ್ಯರ್ಥಿಗಳು ಒಂದು ಸೆಟ್ ರೆಸ್ಯೂಮ್ನೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

- Advertisement - 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು (೦೮೨೬೨೨೯೫೫೩೮/ ೯೯೪೫೧೯೮೫೦೦) ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದಾರೆ.

 

- Advertisement - 

Share This Article
error: Content is protected !!
";