ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನ ರದ್ದು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಶಾಸಕ ಸ್ಥಾನ ಕಳೆದುಕೊಂಡಿದ್ದಾರೆ.

- Advertisement - 

ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, ಏಳು ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು. ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ ಅವರು ಕೋರ್ಟ್​ ಮುಂದೆ ಅಂಗಲಾಚಿ ಬೇಡಿಕೊಂಡಿದ್ದರು. ಆದರೆ, ರೆಡ್ಡಿ ಮನವಿಯನ್ನು ಕೋರ್ಟ್​ ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

- Advertisement - 

ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಿದ್ದಾರೆ.

 ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅವರನ್ನು ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

- Advertisement - 

ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂಸದ 2 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಜೈಲು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಈಗ ರೆಡ್ಡಿ ಶಾಸಕ ಸ್ಥಾನವು ಅದರಂತೆ ಅನರ್ಹಗೊಂಡಿದೆ.

ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಕೋರ್ಟ್, ಅನುಮಾತಿ ಕೊಟ್ಟಿರಲಿಲ್ಲ. ಹೀಗಾಗಿ ರೆಡ್ಡಿ ಕೆಆರ್​ಎಸ್​ ಪಕ್ಷ ಕಟ್ಟಿ ​ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

 

Share This Article
error: Content is protected !!
";