ಉನ್ನತಾಧಿಕಾರಿಗಳು, ಸೇನಾ ಮುಖ್ಯಸ್ಥರ ಸಭೆ ನಡೆಸಿದ ಪ್ರಧಾನಿ ಮೋದಿ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಭಾರತೀಯ ಸೇನೆಯು ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಗೆ ವಿರಾಮ ನೀಡುವಂತೆ ಅಂಗಲಾಚಿದ್ದ ಪಾಕಿಸ್ತಾನ
, ಬಳಿಕ ಗಡಿಯಲ್ಲಿ ಮಾತಿಗೆ ತಪ್ಪಿದೆ.

- Advertisement - 

ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳು ಮತ್ತು ಮೂರು ಸೇನಾ ಮುಖ್ಯಸ್ಥರ ಜೊತೆ ಮಹತ್ವದ ಸಭೆ ನಡೆಸಿ ಪರಿಸ್ಥಿತಿಯ ಅವಲೋಕನ ಮತ್ತು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದರು.

- Advertisement - 

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್.ಜೈಶಂಕರ್, ಎನ್​ಎಸ್ಎ ಮುಖ್ಯಸ್ಥ ಅಜಿತ್​ ದೋವಲ್​​​​, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್​) ಜನರಲ್ ಅನಿಲ್ ಚೌಹಾಣ್ ಮತ್ತು ಮೂರೂ ಸೇನಾ ಪಡೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ:
ಭಾರತದ ಸೇನಾ ಪಡೆಗಳು ಪಹಲ್ಗಾಮ್​ ಉಗ್ರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಆಪರೇಷನ್ ಸಿಂಧೂರ ಹೆಸರಲ್ಲಿ ಕಾರ್ಯಾಚರಣೆ ನಡೆಸಿ ಉಗ್ರ ನೆಲೆಗಳನ್ನು ಧ್ವಂಸ ಮಾಡಿದೆ. ನಾಲ್ಕೇ ದಿನದಲ್ಲಿ ಭಾರತದ ದಾಳಿಗೆ ಪಾಕಿಸ್ತಾನ ತತ್ತರಿಸಿ ಅಮೆರಿಕದ ಮುಂದೆ ಮಂಡಿಯೂರಿ ಕದನ ವಿರಾಮಕ್ಕೆ ಅಂಗಲಾಚಿತ್ತು ಬೇಡಿಕೊಂಡಿತ್ತು.

- Advertisement - 

ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರು ಭಾರತದೊಂದಿಗೆ ಸತತ ಮಾತುಕತೆ ನಡೆಸಿ ಎರಡೂ ರಾಷ್ಟ್ರಗಳ ನಡುವಿನ ಕದನಕ್ಕೆ ವಿರಾಮ ನೀಡಲು ಒಪ್ಪಿಸಿದ್ದರು. ಅದರಂತೆ ಮೇ 10ರಂದು ಸಂಜೆ 5 ಗಂಟೆಗೆ ಅನ್ವಯಿಸುವಂತೆ ಕದನ ವಿರಾಮ ಘೋಷಿಸಲಾಗಿತ್ತು.

ಆದರೆ, ಕಪಟಿ ಪಾಕಿಸ್ತಾನವು ವಿರಾಮ ಘೋಷಿಸಿದ ಕೆಲವೇ ಗಂಟೆಯಲ್ಲಿ ಗಡಿಯಲ್ಲಿ ರಾತ್ರಿ ಶೆಲ್​, ಕ್ಷಿಪಣಿ ದಾಳಿ ನಡೆಸಿ ಒಪ್ಪಂದ ಉಲ್ಲಂಘಿಸಿದೆ. ಪಾಕಿಸ್ತಾನವು ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಭಾರತ ಶನಿವಾರ ರಾತ್ರಿ ಆರೋಪಿಸಿತ್ತು. ಇದರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿತ್ತು. ಈ ಬಗ್ಗೆ ಚರ್ಚೆ ಪ್ರಧಾನಿ ಮೋದಿ ಅವರು ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.

ಶನಿವಾರ ರಾತ್ರಿ ಪಾಕಿಸ್ತಾನ ನಡೆಸಿದ ಶೆಲ್ ಮತ್ತು ಡ್ರೋನ್ ದಾಳಿಯ ನಂತರ ಭಾರತ- ಪಾಕಿಸ್ತಾನದ ಗಡಿ ಪ್ರದೇಶಗಳಲ್ಲಿನ ನಿವಾಸಿಗಳು ಆತಂಕದಲ್ಲಿದ್ದಾರೆ. ಆದಾಗ್ಯೂ ಪರಿಸ್ಥಿತಿ ಸಹಜವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಿಎಂ ಅಸಮಾಧಾನ: ಕದನ ವಿರಾಮ ಘೋಷಣೆಯನ್ನು ಸ್ವಾಗತಿಸಿದ್ದ ಜಮ್ಮು-ಕಾಶ್ಮೀರ ಸಿಎಂ ಒಮರ್​ ಅಬ್ದುಲ್ಲಾ ಬಳಿಕ ಪಾಕಿಸ್ತಾನ ನಿಯಮ ಉಲ್ಲಂಘಿಸಿ ನಡೆಸಿದ ದಾಳಿಯನ್ನು ಖಂಡಿಸಿದ್ದರು. ವಿರಾಮದ ಬಳಿಕವೂ ಗಡಿಯಲ್ಲಿ ಸ್ಫೋಟ ಸದ್ದು ಕೇಳಿಬರುತ್ತಿದೆ ಎಂದು ಅವರು ಅಸಮಾಧಾನ ಹೊರ ಹಾಕಿದ್ದರು.

 

Share This Article
error: Content is protected !!
";