ಸೈನಿಕರಿಗೆ ನೈತಿಕ ಸ್ಥೈರ್ಯ ನೀಡುವ ಸಲುವಾಗಿ ತಿರಂಗಾ ಯಾತ್ರೆ ಮಾಡಿದ ಬಿಜೆಪಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಹಲ್ಗಾಮ್ ದಾಳಿಗೆ ಪ್ರತಿ ದಾಳಿಯಾಗಿ ಭಾರತವು ಆಪರೇಷನ್ ಸಿಂಧೂರ ಮೂಲಕ ಪ್ರತ್ಯುತ್ತರ ನೀಡಿದ್ದಕ್ಕಾಗಿ ಮತ್ತು ನಮ್ಮ ಹೆಮ್ಮೆಯ ಸೈನಿಕರಿಗೆ ನೈತಿಕ ಸ್ಥೈರ್ಯ ನೀಡುವ ಸಲುವಾಗಿ ಇಂದು ಬೆಂಗಳೂರಿನ ವಿದ್ಯಾರಣ್ಯಪುರದ

- Advertisement - 

ಎನ್‌ಟಿಐ ಆಟದ ಮೈದಾನದಿಂದ ಸಹಕಾರ ನಗರದ ಗಣೇಶ ದೇವಸ್ಥಾನದವರೆಗೆ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಮತ್ತು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ರಾಷ್ಟ್ರ ರಕ್ಷಣೆಗಾಗಿ ನಾವೆಲ್ಲರೂಎಂಬ ಘೋಷವಾಕ್ಯದಡಿ ತಿರಂಗಾ ಯಾತ್ರೆ ನಡೆಯಿತು.

- Advertisement - 

ಈ ಸಂದರ್ಭದಲ್ಲಿ ನಿವೃತ್ತ ಮಾರ್ಷಲ್ ಎಸ್. ಪಿ. ಸಿಂಗ್, ಶಾಸಕರಾದ ಚೆನ್ನಿ,  ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement - 
Share This Article
error: Content is protected !!
";