ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ಛಲವಾದಿ ನಾರಾಯಣ ಸ್ವಾಮಿ ಭೇಟಿ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಹೋಬಳಿ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಕರ್ನಾಟಕ ಸರ್ಕಾರದ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಬೇಟಿ ನೀಡಿ ದರ್ಶನ ಪಡೆದರು.

- Advertisement - 

ಘಾಟಿ ದೇವಾಲಯ ಆಡಳಿತ ಮಂಡಳಿಯಿಂದ ವಿಶೇಷ ಪೂಜೆ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರಿನಿಂದ ಬಂದ ಅವರನ್ನು ದೇವಾಲಯದ ವತಿಯಿಂದ ಸ್ವಾಗತ ಕೋರಲಾಯಿತು.  ನಂತರ ರಾಷ್ಟೋತ್ಥಾನ ಗೋ ಶಾಲೆ ಬೇಟಿ ನೀಡಿ ಗೋವುಗಳನ್ನ ವೀಕ್ಷಿಸಿದ ಬಳಿಕ ಬೆಂಗಳೂರಿಗೆ ತೆರಳಿದರು.

- Advertisement - 

ಈ ಸಂದರ್ಭದಲ್ಲಿ ದೇವಾಲಯದ  ಕಾರ್ಯ ನಿರ್ವಾಹಕ ಅಧಿಕಾರಿ ಬಿ. ನಾರಾಯಣಸ್ವಾಮಿ ದೇವಾಲಯದ ಆರ್ಚಕ ಶ್ರೀನಿಧಿ ತೂಬಗೆರೆ ಹೋಬಳಿ ಜಿಡಿಎಸ್ ಅಧ್ಯಕ್ಷ ಜಗನ್ನಾಥ ಚಾರಿ ಸಮಾಜ ಸೇವಕ ಮುತ್ತಣ್ಣ ಹಾಗು ದೇವಾಲಯದ ಸಿಬ್ಬಂದಿ ಹಾಜರಿದ್ದರು.

- Advertisement - 
Share This Article
error: Content is protected !!
";