ಪ್ರಬಲ ಆಕಾಂಕ್ಷಿ ಬಿ.ಸಿ. ಆನಂದ್ ಕುಮಾರ್ ನಾಮಪತ್ರ ಸಲ್ಲಿಕೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಮೇ 25 ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ  ಸ್ಪರ್ಧಿಸುವ ನಿಟ್ಟಿನಲ್ಲಿ ಆಕಾಂಕ್ಷಿಯಾಗಿ  ಬಿ ಸಿ ಆನಂದ್ ಕುಮಾರ್ ಇಂದು ನಾಮಪತ್ರ ಸಲ್ಲಿಸಲು  ಸಕಲ ಸಿದ್ಧತೆ ನಡೆಸಿದ್ದು , ತಾಲೂಕಿನ ಎಲ್ಲಾ ಡೈರಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ವರ್ಗ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

- Advertisement - 

 ಈ ಕುರಿತು ಮಾತನಾಡಿರುವ ಅವರು ಮೇ 16ರಂದು ಬೆಳಗ್ಗೆ 9 ಗಂಟೆಗೆ ದೊಡ್ಡಬಳ್ಳಾಪುರ ಶಿಬಿರ ಕಚೇರಿಯಿಂದ ಹೊರಟು ಮಧ್ಯಾಹ್ನ ಸುಮಾರು 12 ಗಂಟೆಗೆ ನಾಮಪತ್ರ ಸಲ್ಲಿಸಲು ತೀರ್ಮಾನಿಸಲಾಗಿದೆ, ಈ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ತಾಲೂಕಿನ ಜನಪ್ರಿಯ ಶಾಸಕರಾದ ಧೀರಜ್ ಮುನಿರಾಜು , ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ. ಮುನೇಗೌಡರನ್ನು ಒಳಗೊಂಡಂತೆ ಹಲವು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು , ನಾಮಪತ್ರ ಸಲ್ಲಿಕೆಗೆ  ಕಡೆಯ ದಿನಾಂಕ ವಾದ್ದರಿಂದ ನಾಳೆ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಮಕ್ಷಮದಲ್ಲಿ  ತಾಲೂಕಿನ ಶಾಸಕರು ಹಾಗೂ ಎನ್‌ಡಿಎ ಮುಖಂಡರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದರು.

- Advertisement - 

ಸಂಸದ ಡಾ. ಕೆ ಸುಧಾಕರ್, ತಾಲೂಕಿನ ಶಾಸಕ ಧೀರಜ್ ಮುನಿರಾಜು ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ ಮುನೇಗೌಡ ರವರ ನೇತೃತ್ವದಲ್ಲಿ ಬಮೂಲ್ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ಆಯ್ಕೆಯನ್ನು ಶೀಘ್ರವಾಗಿ ಮಾಡುವ ನಿರೀಕ್ಷೆ ಇದೆ , ನಾನು ಪ್ರಬಲ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದರು .

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಡೈರಿ ಅಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ವರ್ಗ ಸಿರಿದಂತೆ ಹಿತೈಷಿಗಳು ಭಾಗವಹಿಸಿ  ಆಶೀರ್ವದಿಸುವಂತೆ ಮನವಿ ಮಾಡಿದರು.

- Advertisement - 

 

Share This Article
error: Content is protected !!
";