ಪತ್ರಕರ್ತರ ಮಾಸಾಶನದ ಕಠಿಣ ಷರತ್ತು ಸರಳೀಕರಣಕ್ಕೆ ಕ್ರಮ: ಕೆ.ವಿ.ಪ್ರಭಾಕರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಿವೃತ್ತ ಪತ್ರಕರ್ತರ ಮಾಸಾಶನದಲ್ಲಿರುವ ಕಠಿಣ ಷರತ್ತುಗಳನ್ನು ಸರಳೀಕರಣ ಮಾಡಲು ಕೂಡಲೇ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದ್ದಾರೆ.

- Advertisement - 

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ರಾಜ್ಯಾಧ್ಯಕ್ಷ  ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ವಿಧಾನಸೌಧದಲ್ಲಿ ಪ್ರಭಾಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಚರ್ಚಿಸಿತು.

- Advertisement - 

ಅರ್ಹ ಪತ್ರಕರ್ತರಿಗೆ ಕೂಡಲೇ ಮಾಸಾಶನ ಸಿಗುವಂತಾಗಬೇಕು ಎನ್ನುವುದು ಸರ್ಕಾರದ ಕಾಳಜಿಯಾಗಿದೆ. ಈ ನಿಟ್ಟಿನಲ್ಲಿ ಸಿಎಂ ಗಮನಕ್ಕೆ ತಂದಿದ್ದು, ವಾರ್ತಾ ಇಲಾಖೆ ಆಯುಕ್ತರ ಜೊತೆಗೆ ಮಾತನಾಡಲಾಗಿದೆ. ನಿಯಮಾವಳಿ ಸರಳೀಕರಣಕ್ಕೆ ಕ್ರಮ ವಹಿಸಲಾಗುವುದು ಎಂದು ಪ್ರಭಾಕರ್ ತಿಳಿಸಿದರು.

ಪತ್ರಕರ್ತರ ಮಾಸಾಶನ ನೀಡಲು ಕಠಿಣ ಷರತ್ತುಗಳನ್ನು ಹಾಕಿರುವುದನ್ನು ಕೈಬಿಡಬೇಕು. ಅರ್ಜಿ ಹಾಕಿದ ಪತ್ರಕರ್ತರಿಗೆ ಮಾಸಾಶನ ಮಂಜೂರು ಮಾಡಲು ಈ ಕಠಿಣ ಷರತ್ತುಗಳು ಅಡ್ಡಿಯಾಗಿರುವ ಕಾರಣ ಈ ಯೋಜನೆಯಿಂದ ಬಹುಪಾಲು ಪತ್ರಕರ್ತರು ವಂಚಿತರಾಗುತ್ತಿದ್ದಾರೆ ಎನ್ನುವುದನ್ನು ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

- Advertisement - 

ಸುಧೀರ್ಘ ಅವಧಿಗೆ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಿಗೂ ಅವರ ನಿವೃತ್ತಿ ಸಂದರ್ಭದಲ್ಲಿ ಮಾಸಾಶನ ಯೋಜನೆ ಪ್ರಯೋಜನಕ್ಕೆ ಬರುತ್ತಿಲ್ಲ. ಅನಾರೋಗ್ಯದಿಂದ ಬಳಲುತ್ತಿರುವ ಹಲವು ಪತ್ರಕರ್ತರಿಗೂ ಈ ಯೋಜನೆ ಉಪಯೋಗಕ್ಕೆ ಬಾರದಂತಾಗಿದೆ ಎಂದು  ಮನವಿಯಲ್ಲಿ ತಿಳಿಸಲಾಗಿದೆ.

 ಮಾಸಾಶನ ಮಂಜೂರು ಮಾಡಲು ಅಡ್ಡಿಯಾಗಿರುವ ಕಠಿಣ ಷರತ್ತುಗಳನ್ನು ಕಡ್ಡಾಯವಾಗಿ ತೆರವುಗೊಳಿಸಿ ಸರಳೀಕರಣ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್ ನ ಆನಂದ ಬೈಂದಿನಮನೆ, ರಾಚಪ್ಪ ಮತ್ತಿತರರು ಹಾಜರಿದ್ದರು .

 

Share This Article
error: Content is protected !!
";