ಮಳೆ ಬಾಧಿತ ಬಿಟಿಎಮ್ ಲೇಔಟ್ ಗೆ ಭೇಟಿ ನೀಡಿ ಪರಿಶೀಲಿಸಿದ ಡಿಕೆ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಳೆ ಬಾಧಿತ ಬಿಟಿಎಮ್ ಲೇಔಟ್ ಗೆ ಭೇಟಿ ನೀಡಿ
, ಎನ್.ಎಸ್.ಪಾಳ್ಯದಲ್ಲಿ ಪರಿಸ್ಥಿತಿ ಅವಲೋಕಿಸಿದೆ. ಮಧುವನ್ ಅಪಾರ್ಟ್ ಮೆಂಟ್ ನಲ್ಲಿ ಮಳೆಯಿಂದಾಗಿ ವಿದ್ಯುತ್ ಪ್ರವಹಿಸಿ ಮನಮೋಹನ್ ಕಾಮತ್ ಹಾಗೂ ದಿನೇಶ್ ಎನ್ನುವವರು ಮೃತರಾಗಿದ್ದು ದುರ್ದೈವ. ಅವರ ಕುಟುಂಬಸ್ಥರನ್ನು ಭೇಟಿಯಾಗಿ, ಸಾಂತ್ವನ ತಿಳಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

ಮಳೆಯಿಂದ ಉಂಟಾದ ಅನಾಹುತಗಳ ಅವಲೋಕನ ಹಾಗೂ ಪರಿಸ್ಥಿತಿ ನಿಯಂತ್ರಣಕ್ಕಾಗಿ ನಮ್ಮ ಅಧಿಕಾರಿಗಳ ತಂಡ 24/7 ಕಾರ್ಯನಿರ್ವಹಿಸುತ್ತಿದೆ. ಪರಿಹಾರ ಕಾರ್ಯ ಸಮಾರೋಪಾದಿಯಲ್ಲಿ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಬೆಂಗಳೂರಲ್ಲಿ ನಿರೀಕ್ಷೆಗೆ ಮೀರಿ ಮಳೆಯಾಗುತ್ತಿದೆ. ದಶಕಗಳಿಂದ ಬೆಂಗಳೂರಿನಲ್ಲಿನ ಮೂಲಸೌಕರ್ಯಗಳಲ್ಲಿರುವ ನ್ಯೂನ್ಯತೆಗಳನ್ನು ಸರಿಪಡಿಸಲು
, ಅಭಿವೃದ್ಧಿಪಡಿಸಲು ಕಾರ್ಯೋನ್ಮುಖರಾಗಿದ್ದೇವೆ ಎಂದು ಡಿಸಿಎಂ ತಿಳಿಸಿದರು.

- Advertisement - 

 

 

- Advertisement - 

Share This Article
error: Content is protected !!
";