ರಾಮನಗರ ಜಿಲ್ಲೆ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರು ನಾಮಕರಣ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ
ಎಂದು ಮರು ನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ) ನಿಯಮಗಳು, 1989ನ್ನು ಸಡಿಲಿಕೆ ಮಾಡಲಾಗಿದೆ. ಅದರ ಪ್ರಕಾರ, ಒಂದು ಬಾರಿಯ ಕ್ರಮವಾಗಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ಪಡೆದಿರುವ ವಿವಿಧ ಸಂಘ/ಸಂಸ್ಥೆಗಳು ಬಾಕಿ ಉಳಿಸಿಕೊಂಡಿರುವ ಸಂಪೂರ್ಣ ಗುತ್ತಿಗೆ ಮೌಲ್ಯವನ್ನು ಪ್ರಾಧಿಕಾರವು ಪ್ರಕಟಣೆ ನೀಡಿದ 120 ದಿನಗಳೊಳಗಾಗಿ ಪಾವತಿಸಿದರೆ, ನಿಯಮಾನುಸಾರ ವಿಧಿಸಲಾಗುವ ಬಡ್ಡಿಯ ಮೊತ್ತವನ್ನು ಸಂಪೂರ್ಣವಾಗಿ ಮನ್ನಾ ಮಾಡಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಡಿಸಿಎಂ ತಿಳಿಸಿದರು.

- Advertisement - 

 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉತ್ಪತಿಯಾಗುವ ಹಸಿ ತ್ಯಾಜ್ಯ, ಒಣಿ ತ್ಯಾಜ್ಯ, ನೈರ್ಮಲ್ಯ ನೈರ್ಮಲ್ಯ ತ್ಯಾಜ್ಯ ಮತ್ತು ರಸ್ತೆ ತ್ಯಾಜ್ಯದ ಸಂಗ್ರಹಣೆ ಮತ್ತು ಸಾಗಾಣಿಕೆ ಸೇವೆಗಾಗಿ 7 ವರ್ಷಗಳ ಅವಧಿಗೆ 4,791.95 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ 33 ಪ್ಯಾಕೇಜ್‌ಗಳನ್ನಾಗಿ ವಿಂಗಡಿಸಿ, ಟೆಂಡರ್ ಮೂಲಕ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

- Advertisement - 

ಬೆಂಗಳೂರು ಮೆಟ್ರೋ ರೈಲು ಹಂತ-3 ಯೋಜನೆಯ 40,425.02 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ವಿವರ ನೀಡಿದರು.

Share This Article
error: Content is protected !!
";