ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ನಿಷೇಧಾಜ್ಞೆ ಜಾರಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೇ 26 ರಿಂದ ಜೂನ್ 02 ರ ವರಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ2 ನಡೆಯಲಿರುವ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಆದೇಶಿಸಿದ್ದಾರೆ.

ಜಿಲ್ಲಾದ್ಯಂತ 28 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ಕಲಂ 144 ಸೆಕ್ಷನ್ ಜಾರಿ ಮಾಡಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

- Advertisement - 

ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ, ಕಂಪ್ಯೂಟರ್ ಇಂಟರ್‌ನೆಟ್ ಕೇಂದ್ರಗಳನ್ನು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯುವಂತಿಲ್ಲ.

ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

- Advertisement - 

 

Share This Article
error: Content is protected !!
";