ಕೋಮು ಗಲಭೆ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ಅವರು ಕರಾವಳಿ ಜಿಲ್ಲೆಯವರು
, ಅಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸೂಕ್ಷ್ಮತೆಗಳನ್ನು ಅರಿತವರು. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ‌ ಕೋಮು ವೈಷಮ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗುರುವಾರ ಅವರ ಜೊತೆ ಉಪಹಾರ ಸೇವಿಸುತ್ತಾ,

ಕೆಲವು ಸಾಮಾನ್ಯ ವಿಷಯಗಳ ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ ದ್ವೇಷ ತೊಡೆದುಹಾಕಿ ಸೌಹಾರ್ದತೆ ನೆಲೆಗೊಳಿಸುವ ಕುರಿತು ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement - 

ಬಿ.ಕೆ.ಹರಿಪ್ರಸಾದ್ ಅವರ ಭೇಟಿಯ ನಂತರ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿ ಮಾತನಾಡಿದರು.

ರಾಜ್ಯದಲ್ಲಿ ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಸಿಎಂ ಎಚ್ಚರಿಸಿದ್ದಾರೆ.

- Advertisement - 

 

Share This Article
error: Content is protected !!
";