ಡಿಸಿಎಂ ಡಿಕೆಶಿ ಪತ್ರ, ಕಾಂಗ್ರೆಸ್ ಸರ್ಕಾರದ ಆಂತರಿಕ ಸಂಘರ್ಷಕ್ಕೆ ಪುಷ್ಟಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಸಿಎಂ ಸಿದ್ದರಾಮಯ್ಯ
ಹಾಗು ಡಿಸಿಎಂ ಡಿ ಕೆ ಶಿವಕುಮಾರ ಅವರ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಅಧಿಕಾರ ಹಸ್ತಾಂತರದ ಘಳಿಗೆ ಹತ್ತಿರ ಬರುತ್ತಿದ್ದಂತೆ ವಿಸ್ಫೋಟವಾಗುವ ಎಲ್ಲ ಲಕ್ಷಣಗಳೂ ಸ್ಪಷ್ಟವಾಗಿ ಕಾಣುತ್ತಿದ್ದು,

ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿಗಳ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಂತರಿಕ ಸಂಘರ್ಷಕ್ಕೆ ಪುಷ್ಟಿ ನೀಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

- Advertisement - 

ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ, ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದಿಂದ ಕರ್ನಾಟಕದ ಅಭಿವೃದ್ಧಿ ಸೊರಗುತ್ತಿದೆ ಎಂದು ಅಶೋಕ್ ಅವರು ಟೀಕಿಸಿದ್ದಾರೆ.

 

- Advertisement - 

Share This Article
error: Content is protected !!
";