ಚಿನ್ನಾಭರಣ ದೋಚುತ್ತಿದ್ದ ನಾಲ್ವರು ಕಳ್ಳಿಯರ ಬಂಧನ

News Desk

ಚಂದ್ರವಳ್ಳಿ ನ್ಯೂಸ್, ಹಾಸನ:
ಸಾರಿಗೆ ಸಂಸ್ಥೆಯ ಬಸ್​ಗಳಲ್ಲಿ ಪ್ರಯಾಣಿಸುವ ಮಹಿಳೆಯರನ್ನು ಗುರಿಯಾಗಿಸಿ ಚಿನ್ನಾಭರಣ ದೋಚುತ್ತಿದ್ದ ನಾಲ್ವರು ಕಳ್ಳಿಯರನ್ನು ಬಂಧಿಸುವಲ್ಲಿ ಹಾಸನ ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisement - 

ಹೊರ ರಾಜ್ಯದ ಆರೋಪಿಗಳಾದ ಶಶಿಕಲಾ (35), ಮಾಧವಿ (40), ಅಕಿಲ (30) ಹಾಗೂ ವಿದ್ಯಾ (29) ಬಂಧಿತರು. ಬಂಧಿತರೆಲ್ಲರೂ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಗ್ರಾಮದವಾಗಿದ್ದಾರೆ.

- Advertisement - 

ಬಸ್​ಗಳಲ್ಲಿ ಪ್ರಯಾಣಿಕರ ದಟ್ಟಣೆ, ಮಹಿಳೆಯರು ಕೆಎಸ್‌‍ಆರ್‌ಟಿಸಿ ಬಸ್‌‍ ಹತ್ತುವಾಗ ಅವರ ಮೈಮೇಲಿನ ಮತ್ತು ವ್ಯಾನಿಟಿ ಬ್ಯಾಗ್​​ಗಳಲಿದ್ದ ಚಿನ್ನಾಭರಣಗಳನ್ನು ಆರೋಪಿಗಳು ಕದಿಯುತ್ತಿದ್ದರು. ಕೃತ್ಯ ಎಸಗಿದ ನಂತರ ದಾರಿ ಮಧ್ಯದಲ್ಲೇ ಬಸ್​ನಿಂದ ಇಳಿದು ಪರಾರಿಯಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

 ಬಂಧಿತ ಶಶಿಕಲಾ ಹಾಗೂ ವಿದ್ಯಾ ವಿರುದ್ಧ ಬೆಂಗಳೂರಿನ ಹಲವು ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಮಾಧವಿ ಹಾಗೂ ಅಕಿಲ ಇದೀಗ ಮೊದಲ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ.

- Advertisement - 

ಹೊಳೆನರಸೀಪುರ ನಗರ ಠಾಣೆ ಪೊಲೀಸರು ನಾಲ್ವರು ಮಹಿಳಾ ಆರೋಪಿಗಳನ್ನು ಬಂಧಿಸಿ ಅವರಿಂದ 35 ಗ್ರಾಂ ತೂಕದ ಚಿನ್ನದ ಸರ, 22 ಗ್ರಾಂ ತೂಕದ ನೆಕ್ಲೆಸ್‌, 5 ಗ್ರಾಂ ತೂಕದ ಬೆಳ್ಳಿ ಗಣಪತಿ ಡಾಲರ್‌ ಹಾಗೂ 29 ಗ್ರಾಂ ತೂಕದ ಚಿನ್ನದ ಸರ ಸೇರಿದಂತೆ 6.38 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
error: Content is protected !!
";