ರೈಲ್ವೆ ಕೆಳ ಸೇತುವೆ ಕಾಮಗಾರಿ ಪರಿಶೀಲನೆ ನಡೆಸಿದ ಸೋಮಣ್ಣ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ತುಮಕೂರು ಲೋಕಸಭಾ ಕ್ಷೇತ್ರದ ಸದಸ್ಯ ವಿ.ಸೋಮಣ್ಣ ಅವರು ತಿಪಟೂರಿನಲ್ಲಿ ರೈಲ್ವೆ ಅಧಿಕಾರಿಗಳೊಂದಿಗೆ ಶಾರದಾನಗರದ ಎಲ್‌ಸಿ
86, ಬಂಡಿಹಳ್ಳಿಯ ಎಲ್‌ಸಿ 82 ಮತ್ತು ಗಾಂಧಿನಗರದಲ್ಲಿ ನಡೆಯುತ್ತಿರುವ ರೈಲ್ವೆ ಕೆಳ ಸೇತುವೆ ಕಾಮಗಾರಿಗಳ ಪರಿಶೀಲನೆ ನಡೆಸಲಾಯಿತು.

ತುಮಕೂರು ಲೋಕಸಭಾ ಕ್ಷೇತ್ರದ ತಿಪಟೂರಿನ ಹೊನ್ನವಳ್ಳಿಯಲ್ಲಿಂದು ಎಲ್‌ಸಿ 88ರ ಬದಲಿಗೆ ರಸ್ತೆ ಮೇಲ್ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

- Advertisement - 

ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ಸಿ ನಾಗೇಶ್‌, ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಮಹೇಶ್‌, ಉಪಾಧ್ಯಕ್ಷ ವೆಂಕಟೇಶ್‌, ಮುಖಂಡ ನವೀನ್‌, ಶಾಂತಕುಮಾರ್‌ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";