ಏಕಲವ್ಯ ಮಾದರಿ ವಸತಿ ಶಾಲೆಯ ಶಿಕ್ಷಕರ ಹುದ್ದೆಗೆ ಜೂ.24 ರಂದು ನೇರ ಸಂದರ್ಶನ

News Desk

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಜೂ.24 ರಂದು ಬೆಳಿಗ್ಗೆ 09 ಗಂಟೆಗೆ ಇದೇ ಶಾಲೆಯಲ್ಲಿ ವಾಕ್ ಇನ್ ಇಂಟರ್ ವ್ಯೂ ಏರ್ಪಡಿಸಲಾಗಿದೆ.

ಅರ್ಹ ಅನುಭವವುಳ್ಳ 21 ರಿಂದ 60 ವರ್ಷ ವಯೋಮಿತಿಯೊಳಗಿನ ನವೋದಯ, ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ ಉಪನ್ಯಾಸ ಮಾಡಿದ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

- Advertisement - 

ಹುದ್ದೆ:
ಜೀವಶಾಸ್ತ್ರ ಶಿಕ್ಷಕ01, ಇಂಗ್ಲೀಷ್ ಶಿಕ್ಷಕ01, ದೈಹಿಕ ಶಿಕ್ಷಕಿ(ಮಹಿಳೆ)-02 ಮತ್ತು ವಸತಿ ನಿಲಯಪಾಲಕ01.
ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಶೈಕ್ಷಣಿಕ ದಾಖಲೆಗಳೊಂದಿಗೆ ನಿಗಧಿಪಡಿಸಿದ ದಿನದಂದು ಸಂದರ್ಶನಕ್ಕೆ ಹಾಜರಾಗಬಹುದು. ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ ಎಂದು ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";