ಜೂ.21ರಂದು ಯೋಗ ಹಾಗೂ ಸಂಗೀತ ದಿನದ ಪ್ರಯುಕ್ತ ಅಭಿನಂದನಾ ಸಮಾರಂಭ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಂತಾರಾಷ್ಟ್ರೀಯ ಯೋಗ ಹಾಗೂ ವಿಶ್ವ ಸಂಗೀತ ವಿಶೇಷ ದಿನದ ಪ್ರಯುಕ್ತ  ಅಭಿನಂದನಾ ಸಮಾರಂಭವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಬೆಂಗಳೂರು ಹಾಗೂ ಚಿತ್ರದುರ್ಗ ಯೋಗಾಸನ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ ಚಿತ್ರದುರ್ಗ ಇವರುಗಳ ಸಹಯೋಗದಲ್ಲಿ ಜೂ.21ರಂದು ಶನಿವಾರ ಸಂಜೆ 5:30ಕ್ಕೆ ನಗರದ ಸಹ್ಯಾದ್ರಿ ಬಡಾವಣೆಯ ಎರಡನೇ ಮುಖ್ಯ ರಸ್ತೆಯ ಒಂದನೇ ತಿರುವಿನ ಯೋಗ ಬಂದು ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಯೋಗಾಚಾರ್ಯ ಎಲ್.ಎಸ್ .ಚಿನ್ಮಯಾನಂದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಎಂ. ಗುರುನಾಥ್, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಾರ್ಯದರ್ಶಿ ಹುರುಳಿ ಎಂ. ಬಸವರಾಜ್ ಭಾಗವಹಿಸಲಿದ್ದಾರೆ.

- Advertisement - 

 ವಿಶೇಷವಾಗಿ ಅಭಿನಂದನೆಗೆ ಭಜನಾರಾಗಲಿರುವ ಗಾನಯೋಗಿ ಸಂಗೀತ ಬಳಗದ ಅಧ್ಯಕ್ಷ ಪಂಡಿತ್ ತೋಟಪ್ಪ ಉತ್ತಂಗಿ ಎಂ. ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 99 86295285 ಗೆ ಸಂಪರ್ಕಿಸಲು ಸಂಘಟನೆಗಳವರು ಕೋರಿದ್ದಾರೆ.

 

- Advertisement - 

 

Share This Article
error: Content is protected !!
";