ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಎಲ್ಲೆಡೆ ತಾಂಡವವಾಡುತ್ತಿದ್ದು, ಹಗರಣಗಳಿಂದಲೇ ಸದ್ದುಮಾಡುತ್ತಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಅಲ್ಪಸಂಖ್ಯಾತರ ಇಲಾಖೆಯಲ್ಲಿ ಸುಮಾರು 625 ಕೋಟಿ ರೂಪಾಯಿ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪ ಕೇಳಿ ಬಂದಿದೆ.
ಈ ಸಂಬಂಧ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಪ್ರಾಸಿಕ್ಯೂಷನ್‌ಗಾಗಿ ಅನುಮತಿ ಕೋರಿ ರಾಜ್ಯಪಾಲರಿಗೆ ಜೆಡಿಎಸ್ ಪಕ್ಷದ ವತಿಯಿಂದ ದೂರು ನೀಡಲಾಗುವುದು ಎಂದು ಜೆಡಿಎಸ್ ಎಚ್ಚರಿಸಿದೆ.

