ತಿರುಪತಿ ತಿರುಮಲದಲ್ಲಿ ನೂತನ ಕರ್ನಾಟಕ ಛತ್ರ ಲೋಕಾರ್ಪಣೆ ಮಾಡಿದ ರಾಮಲಿಂಗಾರೆಡ್ಡಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಛತ್ರ (ಮೈಸೂರು ಕಾಂಪ್ಲೆಕ್ಸ್‌) ಶ್ರೀ ಕೃಷ್ಣರಾಜೇಂದ್ರ ಒಡೆಯರ್ ಬ್ಲಾಕ್ಕಲ್ಯಾಣ ಮಂಟಪವನ್ನು ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಿದರು.

ತಿರುಮಲದಲ್ಲಿ ನಿರ್ಮಾಣವಾಗಿರುವ 36 ಕೊಠಡಿಗಳ ವಿಐಪಿ ಬ್ಲಾಕ್, ಕಲ್ಯಾಣಿ ಮತ್ತು ಕರ್ನಾಟಕ ಛತ್ರದ ದೇವಸ್ಥಾನದ ಉದ್ಘಾಟನೆ ಸೆಪ್ಟೆಂಬರ್ ನಲ್ಲಿ ನಡೆಯಲಿದೆ. 36 ಸುಸಜ್ಜಿತ ಕೊಠಡಿಗಳ VIP ಬ್ಲಾಕ್ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣವಾಗಿದೆ ಎಂದು ಸಚಿವರು ತಿಳಿಸಿದರು.

- Advertisement - 

ಅಂತಿಮ ಹಂತದ ಕೆಲಸಗಳು ಪ್ರಗತಿಯಲ್ಲಿವೆ. ಸೆಪ್ಟೆಂಬರ್ ವೇಳೆಗೆ ಪೂರ್ಷಗೊಳ್ಳಲಿದ್ದು, ಆಗ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದರು.

ಸೆಪ್ಟೆಂಬರ್ ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಕರ್ನಾಟಕ ಸರಕಾರದಿಂದ ನಿರ್ಮಾಣಗೊಂಡಿರುವ
36 ರೂಮುಗಳ VIP ಬ್ಲಾಕ್, ಕಲ್ಯಾಣಿ ಮತ್ತು ದೇವಸ್ಥಾನದ ಉದ್ಘಾಟನೆ ನಡೆಯಲಿದೆ. ಈ ಮೂಲಕ ಬಹಳ ವರ್ಷಗಳ ಕರ್ನಾಟಕ ಭಕ್ತರ ಕನಸು ನಸಸಾಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

- Advertisement - 

ಈ ಕಲ್ಯಾಣ ಮಂಟಪ 500 ಆಸನಗಳ ಸಾಮರ್ಥ್ಯ ಹಾಗೂ 13 ಕೊಠಡಿಗಳನ್ನು ಒಳಗೊಂಡಿದೆ. ಕರ್ನಾಟಕದಿಂದ ಬಂದು ತಿರುಮಲದಲ್ಲಿ ಮದುವೆ, ನಾಮಕರಣ ಮೊದಲಾದ ಶುಭ ಸಮಾರಂಭಗಳನ್ನು ಆಯೋಜನೆ ಮಾಡುವ ಭಕ್ತರಿಗೆ ಇದು ಲಭ್ಯವಿರಲಿದೆ ಎಂದು ಅವರು ಹೇಳಿದರು.

ಶ್ರೀ ಕೃಷ್ಣ ರಾಜೇಂದ್ರ ಒಡೆಯರ್ ಕಲ್ಯಾಣ ಮಂಟಪ ನಿರ್ಮಾಣ ತಿರುಮಲಕ್ಕೆ ಆಗಮಿಸುವ ಕರ್ನಾಟಕದ ಭಕ್ತರ ಅನುಕೂಲತೆಯತ್ತ ರಾಜ್ಯ ಸರ್ಕಾರ ಕೈಗೊಂಡ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಆನ್ ಲೈನ್ ಮೂಲಕ ಬುಕ್ಕಿಂಗ್ ಮಾಡಿಕೊಂಡು ಈ ಸೇವೆಯನ್ನು ಕರ್ನಾಟಕದ ಭಕ್ತರು ಪಡೆದುಕೊಳ್ಳಬಹುದು ಎಂದು ಸಚಿವರು ತಿಳಿಸಿದರು.

ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯ, ಮುಜರಾಯಿ ಇಲಾಖೆ ಆಯುಕ್ತ ಎಂ. ವಿ ವೆಂಕಟೇಶ್, ಅನೇಕ ಮುಖಂಡರು  ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

 

 

Share This Article
error: Content is protected !!
";