ತಲಾದಾಯ ಪರಿಗಣಿಸುವ ಮಾನದಂಡ ಶೇ.45 ರಿಂದ ಶೇ. 20ಕ್ಕೆ ಇಳಿಸಿ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ತಲಾವಾರು ಆದಾಯವನ್ನು ಪರಿಗಣಿಸುವ ಮಾನದಂಡವನ್ನು ಶೇ.45 ರಿಂದ ಶೇ. 20ಕ್ಕೆ ಇಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಕೋರಿದರು.

ಕೇರಳ, ಆಂಧ್ರ, ತಮಿಳುನಾಡು ರಾಜ್ಯಗಳಿಗೆ ನೀಡಿದಂತೆ ಆದಾಯ ಕೊರತೆ ಅನುದಾನವನ್ನು ಕರ್ನಾಟಕಕ್ಕೂ ನೀಡಬೇಕು. ಇಲ್ಲವೇ  ಯಾವುದೇ ರಾಜ್ಯಗಳಿಗೆ ನೀಡಬಾರದು.

- Advertisement - 

ರಾಜಸ್ವ ಹೆಚ್ಚಳದಲ್ಲಿ ಖರ್ಚಿಗಿಂತ ಆದಾಯ ಹೆಚ್ಚಿದ್ದು, ವಿತ್ತೀಯ ಕೊರತೆಯಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ರಾಜಸ್ವ ಹೆಚ್ಚಳದಲ್ಲಿದ್ದ ಕರ್ನಾಟಕ ಕಳೆದ ವರ್ಷದಿಂದ ವಿತ್ತೀಯ ಕೊರತೆ ಎದುರಿಸುತ್ತಿದ್ದು, ಮುಂದಿನ ವರ್ಷಕ್ಕೆ ಈ ಪರಿಸ್ಥಿತಿ ಸುಧಾರಿಸಲಿದೆ.

ನಿರಂತರವಾಗಿ ವಿತ್ತೀಯ ಕೊರತೆಯಲ್ಲಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ನು ನೀಡಲಾಗುತ್ತದೆ. ಹಣಕಾಸಿನ ಕಾರ್ಯಕ್ಷಮತೆ ತೋರದಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ನು ನೀಡುತ್ತಿರುವ ಕೇಂದ್ರದ ಕ್ರಮ ಸರಿಯಾದುದಲ್ಲ. ಈ ಬಗ್ಗೆ ಗಮನ ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋರಿದರು.

- Advertisement - 

 

 

Share This Article
error: Content is protected !!
";