ನಾಡಹಬ್ಬ ಮೈಸೂರು ದಸರಾ ಪೂರ್ವಭಾವಿ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಶನಿವಾರ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ವಿಧಾನಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ, ಸಮಾಲೋಚನೆ ನಡೆಸಿದರು.

ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿ, ನಾಡಹಬ್ಬ ಮೈಸೂರು ದಸರಾ- 2025ರ ಆಚರಣೆ ಸಂಬಂಧ ಪೂರ್ವಭಾವಿಯಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಭೆ ನಡೆಸಲಾಯಿತು ಎಂದರು.

- Advertisement - 

ಮೈಸೂರು ದಸರಾವನ್ನು ಈ ಬಾರಿ ಮತ್ತಷ್ಟು ವಿಜೃಂಭಣೆಯಿಂದ ಆಚರಿಸುವ ಕುರಿತು ಮತ್ತು ಯಶಸ್ವಿ ನಿರ್ವಹಣೆಗೆ ಬೇಕಾದ ಅಗತ್ಯ ಕ್ರಮಗಳ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿ, ಭದ್ರತಾ ವ್ಯವಸ್ಥೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು ಎಂದು ಡಿಸಿಎಂ ತಿಳಿಸಿದರು.

ಮುಂಬರುವ ದಿನಗಳಲ್ಲಿ ಇನ್ನಷ್ಟು ಪೂರ್ವಸಿದ್ಧತಾ ಸಭೆಗಳನ್ನು ನಡೆಸಿ, ಈ ಬಾರಿಯ ನಾಡಹಬ್ಬವನ್ನು ಇನ್ನಷ್ಟು ಸ್ಮರಣೀಯವಾಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಮಾಲೋಚಿಸಲಾಯಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

- Advertisement - 

ಸಭೆಯಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ.ವೆಂಕಟೇಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಶಾಸಕರಾದ ಜಿ.ಟಿ.ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ,

ತನ್ವೀರ್‌ ಸೇಠ್, ಡಾ.ಯತೀಂದ್ರ ಎಸ್‌, ಡಾ.ಡಿ.ತಿಮ್ಮಯ್ಯ, ಅನಿಲ್‌ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಅಯೂಬ್‌ ಖಾನ್ ಮತ್ತಿತರರು ಉಪಸ್ಥಿತರಿದ್ದರು.

 

 

Share This Article
error: Content is protected !!
";