ಎಟಿಎಂಗೆ ಪೆಟ್ರೋಲ್ ಸುರಿದು ಕಳ್ಳತನಕ್ಕೆ ಮುಂದಾದ ಕಳ್ಳರು, ಮುಂದೇನಾಯ್ತು ಗೊತ್ತಾ

News Desk

ಚಂದ್ರವಳ್ಳಿ ನ್ಯೂಸ್, ಜಗಳೂರು:
ಎಟಿಎಂಗೆ ಪೆಟ್ರೋಲ್ ಸುರಿದು ಕಳವಿಗೆ ಖದೀಮರು ಮುಂದಾಗಿದ್ದು
, ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಬಳಿಕ ಪರಾರಿಯಾದ ಘಟನೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ.
ಕಳ್ಳರ ಕೈಚಳಕದ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮಧ್ಯರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ಕಳ್ಳರು ನುಗ್ಗಿದ್ದಾರೆ.‌ ಮೊದಲು ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದೇ ಇದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

- Advertisement - 

ಈ ವೇಳೆ ಶಾರ್ಟ್‌ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ.ವಿಚಾರ ತಿಳಿಯುತ್ತಿದ್ದಂತೆ ಬ್ಯಾಂಕ್ ಸಿಬ್ಬಂದಿ ಪೊಲೀಸರ ಸಮೇತ ಎಟಿಎಂ ಬಳಿಗೆ ಧಾವಿಸಿದ್ದಾರೆ. ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement - 
Share This Article
error: Content is protected !!
";