ನಗರಸಭೆ : ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರಸಭೆ ಹಾಗೂ ಎಸ್.ಎಫ್.ಸಿ ನಿಧಿಯಡಿ 2025-26ನೇ ಸಾಲಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಶೇ.24.10 ಹಾಗೂ ಶೇ.7.25 ಕ್ರಿಯಾಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಜನಾಂಗದ ಎಸ್.ಎಸ್.ಎಲ್.ಸಿ ಯಿಂದ ಸ್ನಾತಕೋತ್ತರ ಪದವಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧ, ಎಲ್.ಎಲ್.ಬಿ ಪದವಿ ಪಡೆದು ವೃತ್ತಿ ನಿರತ ವಕೀರಲರಿಗೆ ಪುಸ್ತಕ ಖರೀದಿಗೆ ಸಹಾಯಧನ ನೀಡಲಾಗುವುದು.

- Advertisement - 

ಇದರೊಂದಿಗೆ ನಗರ ವ್ಯಾಪ್ತಿಯಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಮನೆ ನಿರ್ಮಾಣ ಮಾಡುವ ಫಲಾನುಭವಿಗಳಿಗೆ ಸಹಾಯ ಧನ ನೀಡುವ ಕ್ರಿಯಾ ಯೋಜನೆಗೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ.

ಶೇ.5ರ ಯೋಜನೆಯಡಿ ವಿಕಲಚೇತನರಿಗೆ ಯಂತ್ರಚಾಲಿತ 3 ಚಕ್ರ ವಾಹನ ಖರೀದಿಸಿ ನೀಡಲಾಗುವುದು.
ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ವಾಸವಿರುವ ಅರ್ಹರು ಸೆಪ್ಟೆಂಬರ್ 30 ಒಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ವೆಬ್‍ಸೈಟ್  www.chitradurgacity.mrc.gov.in     ಕಚೇರಿ ವಿಷಯ ನಿರ್ವಾಹಕರನ್ನು ಸಂಪರ್ಕಿಸುವಂತೆ ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";