ಚಂದ್ರವಳ್ಳಿ ನ್ಯೂಸ್, ಆನೇಕಲ್, ಬೆಂ,ಗ್ರಾ.ಜಿಲ್ಲೆ:
ದೊಡ್ಡ ನಾಗಮಂಗಲ ಸಾಯಿ ಲೇಔಟ್ನಲ್ಲಿ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಕಳೆದ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ದೊಡ್ಡ ನಾಗಮಂಗಲ ಸಾಯಿ ಲೇಔಟ್ನಲ್ಲಿರುವ ತಮ್ಮ ಸ್ನೇಹಿತನ ಮನೆಗೆ ಸಂತ್ರಸ್ತೆ ಹೋಗಿದ್ದರು. ಈ ವೇಳೆ ಮನೆಯೊಳಗೆ ಬಂದ ಇಬ್ಬರು ವ್ಯಕ್ತಿಗಳು ಪೊಲೀಸರಿಗೆ ದೂರು ನೀಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದಲ್ಲದೆ ಸಂತ್ರಸ್ತೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಆರೋಪಿಗಳು ಅತ್ಯಾಚಾರ ಎಸಗಿದ ಬಳಿಕ ಮಹಿಳೆ ಬಳಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಆಗ, ಸಂತ್ರಸ್ತೆ ತನ್ನ ಸ್ನೇಹಿತೆಯ ಅಕೌಂಟ್ನಿಂದ ಹಣ ನೀಡಿದ್ದಾಳೆ. ಆರೋಪಿಗಳು, ಈ ಹಣವನ್ನು ಬೆಟ್ಟಿಂಗ್ ಆ್ಯಪ್ ಅಕೌಂಟ್ಗೆ ಹಾಕಿಸಿಕೊಂಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಆರೋಪಿಗಳು, ಸಂತ್ರಸ್ತೆಯ ಮತ್ತು ಇವರ ಸ್ನೇಹಿತನ ಮೊಬೈಲ್ ಕಸಿದುಕೊಂಡರಲ್ಲದೆ ಮನೆಯಲ್ಲಿದ್ದ ಪ್ರಿಡ್ಜ್, ವಾಶಿಂಗ್ ಮೆಷಿನ್ ಹೊತ್ತೊಯ್ದಿದ್ದಾರೆ.
ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

