ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ವಿಧಾನ ಪರಿಷತ್ ಸದಸ್ಯರುಗಳ ಸಭೆ ನಡೆಸಲಾಯಿತು ಎಂದುಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಸದ್ಯದಲ್ಲೇ ಆರಂಭವಾಗಲಿರುವ ಅಧಿವೇಶನದಲ್ಲಿ ಭ್ರಷ್ಟ ಹಾಗೂ ಜನವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ರಾಜ್ಯದ ಜನಸಾಮಾನ್ಯರ ಪರ ಸಂಘಟಿತ ಹೋರಾಟ ನಡೆಸುವ ನಿಟ್ಟಿನಲ್ಲಿ ಚರ್ಚಿಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಸಿಟಿ ರವಿ, ವಿಧಾನ ಪರಿಷತ್ ವಿರೋಧ ಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೀವ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಭಾರತಿ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

